ಬೆಲೆ ಏರಿಕೆ ತಡೆ ಮತ್ತು ನಿರುದ್ಯೋಗ ನಿವಾರಣೆ ಮಾಡುವಂತೆ ಒತ್ತಾಯಿಸಿ ಭಾರತ ಕಮ್ಯುನಿಷ್ಟ್ ಪಕ್ಷ (ಸಿಪಿಐ) ಮತ್ತು ಭಾರತ ಕಮ್ಯುನಿಸ್ಟ್ ಪಕ್ಷ (ಎಂ) (ಸಿಪಿಐಎಂ) ಪಕ್ಷಗಳು ಜಂಟಿಯಾಗಿ ನಗರದಲ್ಲಿ ಇಂದು ಪ್ರತಿಭಟನೆ ನಡೆಸಿದವು.
ಬೆಲೆ ಏರಿಕೆ ತಡೆ-ನಿರುದ್ಯೋಗ ನಿವಾರಣೆಗೆ ಆಗ್ರಹಿಸಿ ಪ್ರತಿಭಟನೆ
ಮೂಲಭೂತ ಸೌಕರ್ಯಗಳ ಸರಿಪಡಿಸಲು ಆಗ್ರಹ
ನಗರ ಪಾಲಿಕೆ ವ್ಯಾಪ್ತಿಯ ಭಾಷಾ ನಗರದಲ್ಲಿನ ಚರಂಡಿ, ರಸ್ತೆ, ಬೀದಿ ದೀಪ ಸೇರಿದಂತೆ ಇನ್ನಿತರೆ ಮೂಲಭೂತ ಸೌಕರ್ಯಗಳ ಸರಿಪಡಿಸುವಂತೆ ಆಗ್ರಹಿಸಿ ಸೋಷಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಸ್ಟ್) ಜಿಲ್ಲಾ ಸಮಿತಿ ನೇತೃತ್ವದಲ್ಲಿ ಸ್ಥಳೀಯ ನಾಗರಿಕರು ನಗರದ ಅಕ್ತರ್ ರಜಾ ವೃತ್ತದಲ್ಲಿ ಇಂದು ಪ್ರತಿಭಟನೆ ನಡೆಸಿದರು.
ಉದ್ಯೋಗಾಕಾಂಕ್ಷಿಗಳಿಗೆ ಕನ್ನಡ ಕಲಿಕೆ ಅವಶ್ಯ
ಕನ್ನಡ ನಮ್ಮ ರಾಜ್ಯ ಭಾಷೆ, ಕಲಿಯಲು ಬಲು ಸುಲಭವಾದ ಭಾಷೆ. ನಾವು ಅದನ್ನು ಗೌರವಿಸುವುದರ ಜೊತೆಗೆ ನಾವು ಕನ್ನಡಿಗರು ಎಂದು ಹೆಮ್ಮೆ ಪಡ ಬೇಕು. ಕನ್ನಡದ ಪರ ಒಲವನ್ನು ಎಲ್ಲರೂ ಮೈ ಗೂಡಿಸಿಕೊಳ್ಳಬೇಕು, ಮುಖ್ಯವಾಗಿ ಉದ್ಯೋಗಾ ಕಾಂಕ್ಷಿಗಳು ಕನ್ನಡವನ್ನು ಅವಶ್ಯವಾಗಿ ಕಲಿಯ ಬೇಕು.
ವಿಶ್ವ ಲಿಪಿಗಳ ರಾಣಿ ಕನ್ನಡ ಭಾಷೆ
ಹರಪನಹಳ್ಳಿ : ಆಂಗ್ಲ ಭಾಷೆಗೆ ಸ್ವಂತ ಲಿಪಿಯಿಲ್ಲ. ಆದರೆ ಕನ್ನಡ ಭಾಷೆ ಪುರಾತನ ಭಾಷೆಯಾಗಿದ್ದು, ವಿಶ್ವ ಲಿಪಿಗಳ ರಾಣಿ ಕನ್ನಡ ಭಾಷೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಯು. ಬಸವರಾಜಪ್ಪ ಹೇಳಿದರು.
ಖಾಲಿ ಇರುವ ಸಹಾಯಕ ನಿರ್ದೇಶಕರ ಹುದ್ದೆಗಳಿಗೆ ಬಡ್ತಿಗಾಗಿ ಆಗ್ರಹ
ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಹುದ್ದೆಯಿಂದ ಖಾಲಿ ಇರುವ ಸಹಾಯಕ ನಿರ್ದೇಶಕರ ಹುದ್ದೆಗಳಿಗೆ ಬಡ್ತಿ ನೀಡಲು ಕ್ರಮವಹಿಸಬೇಕೆಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ,ಮನವಿ ಸಲ್ಲಿಸಲಾಯಿತು.
ಜ್ಞಾನಕ್ಕಿಂತ ಶ್ರೇಷ್ಠ ಜಗತ್ತಿನಲ್ಲಿ ಮತ್ತೊಂದಿಲ್ಲ
ಹರಿಹರ : ಜಗತ್ತಿನಲ್ಲಿ ಜ್ಞಾನಕ್ಕಿಂತ ಶ್ರೇಷ್ಠವಾದದ್ದು ಮತ್ತೊಂದಿಲ್ಲ. ವಿದ್ಯಾರ್ಥಿಗಳು ಹೆಚ್ಚು ಜ್ಞಾನ ಸಂಪಾದನೆ ಮಾಡಿದರೆ ಜಗತ್ತು ನಿಮಗೆ ಗೌರವ, ಸ್ಥಾನಮಾನವನ್ನು ನೀಡುತ್ತದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಗೌರವ ಕಾರ್ಯದರ್ಶಿ ಮತ್ತು ತಿಪ್ಪೇರುದ್ರಸ್ವಾಮಿ ಪ್ರೌಢಶಾಲಾ ಮುಖ್ಯಶಿಕ್ಷಕ ಬಿ.ಬಿ. ರೇವಣ್ಣನಾಯ್ಕ್ ಅಭಿಪ್ರಾಯಪಟ್ಟರು.