ನೀತಿ ಸಂಹಿತೆ ಉಲ್ಲಂಘನೆ: ಇಲ್ಲಿವರೆಗೆ 1.60 ಕೋಟಿ ವಸ್ತುಗಳ ವಶ

ದಾವಣಗೆರೆ, ಏ.13- ಸಾರ್ವತ್ರಿಕ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ನೀತಿ ಸಂಹಿತೆ ಜಾರಿಯಲ್ಲಿದ್ದು, ಜಿಲ್ಲೆಯಾದ್ಯಂತ ಕಟ್ಟುನಿಟ್ಟಿನ ಚೆಕ್ ಪೋಸ್ ವ್ಯವಸ್ಥೆ ಮಾಡಲಾಗಿದೆ. ಏ.12 ರಂದು ನೀತಿ ಸಂಹಿತೆ ಉಲ್ಲಂಘಿಸಿ ಸಾಗಿಸುತ್ತಿದ್ದ 5213 ಲೀ. ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ತಿಳಿಸಿದ್ದಾರೆ. 

ಜಿಲ್ಲೆಯಾದ್ಯಂತ ವಿವಿಧ ಚೆಕ್ ಪೋಸ್ಟ್‍ಗಳಲ್ಲಿ ಕಟ್ಟುನಿಟ್ಟಿನ ತಪಾಸಣೆ ಕೈಗೊಳ್ಳಲಾಗುತ್ತಿದ್ದು, ದಾಖಲೆ ಇಲ್ಲದೇ ಸಾಗಿಸುತ್ತಿದ್ದ ನಗದು, ಚಿನ್ನಾಭರಣ ಸೇರಿದಂತೆ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಏಪ್ರಿಲ್ 12 ರ ಬೆಳಗ್ಗೆ 9 ಗಂಟೆಯಿಂದ ಏ.13 ರ ಬೆಳಗ್ಗೆ 9 ಗಂಟೆಯ ಅವಧಿಯಲ್ಲಿ ಸುಮಾರು 5,82,9890 ರೂ. ಮೌಲ್ಯದ 5213.82 ಲೀ ಮದ್ಯ ವಶಪಡಿಸಿಕೊಳ್ಳಲಾಗಿದೆ. 

ಮತ್ತು ಏ.12 ರಂದು ರೂ.4.10 ಲಕ್ಷ ನಗದು ವಶಪಡಿಸಿಕೊಳ್ಳಲಾಗಿದ್ದು, ಇದುವರೆಗೆ 50,11,648 ರೂ. ನಗದು, 6145.185 ಲೀ ಮದ್ಯ ವಶಪಡಿಸಿಕೊಂ ಡಿದ್ದು 61,93,085  ರೂ.  ಮೌಲ್ಯವಿರುತ್ತದೆ. 3.209 ಕೆ.ಜಿ ಮಾದಕ ವಸ್ತು ಅಂದಾಜು ಮೌಲ್ಯ 56,110 ರೂ. ಹಾಗೂ  48,26,735 ರೂ. ಮೌಲ್ಯದ ಇತರೆ ವಸ್ತುಗಳು ಸೇರಿದಂತೆ ಒಟ್ಟು 1.60 ಕೋಟಿಯಷ್ಟು ನಗದು ಮತ್ತು ಇತರೆ ವಸ್ತು ಗಳನ್ನು ನೀತಿ ಸಂಹಿತೆ ಆರಂಭವಾದಾಗಿನಿಂದ ಇಲ್ಲಿಯವರೆಗೆ ವಶಪಡಿಸಿಕೊಳ್ಳಲಾಗಿದೆ. 

ವಶಪಡಿಸಿಕೊಂಡ ಮದ್ಯದಲ್ಲಿ 67.24 ಲೀ ಪೊಲೀಸ್ ಇಲಾಖೆ ಮತ್ತು 6077.945 ಲೀ ಅಬಕಾರಿ ಇಲಾಖೆಯಿಂದ ಕಾರ್ಯಾಚರಣೆ ಮಾಡಿ ವಶಪಡಿಸಿಕೊಳ್ಳಲಾಗಿದೆ. 

error: Content is protected !!