ಸ್ಲಂ ಜನಾಂದೋಲನ ಕರ್ನಾಟಕ ಹಾಗೂ ಸಾವಿತ್ರಿ ಬಾಯಿಪುಲೆ ಮಹಿಳಾ ಸಂಘಟನೆ, ಜಿಲ್ಲಾ ಸಮಿತಿ ವತಿಯಿಂದ ರೋಟರಿ ಬಾಲಭವನದಲ್ಲಿ ಇಂದು ಬೆಳಿಗ್ಗೆ 11ಕ್ಕೆ ಡಾ.ಬಿ.ಆರ್.ಅಂಬೇಡ್ಕರ್ ಅವರ 132ನೇ ಜಯಂತಿ, ಸ್ಲಂ ಜನರ ಪ್ರಣಾಳಿಕೆ-2023 ಬಿಡುಗಡೆ ಕಾರ್ಯಕ್ರಮ ನಡೆಯಲಿದೆ.
ಹಿರಿಯ ವಕೀಲರಾದ ಬಿ.ಎಂ.ಹನುಮಂತಪ್ಪ, ಎಲ್.ಹೆಚ್.ಅರುಣ್ಕುಮಾರ್, ಸ್ಲಂ ಜನಾಂದೋಲನ ಕರ್ನಾಟಕದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ಹೆಚ್.ರೇಣುಕಾ ಯಲ್ಲಮ್ಮ, ಎಸ್ಜೆಕೆ ಗೌರವಾಧ್ಯಕ್ಷ ಎಂ.ಶಬ್ಬೀರ್ ಸಾಬ್, ಮಹಿಳಾ ಅಧ್ಯಕ್ಷೆ ಮಂಜುಳ, ಖಜಾಂಚಿ ಬಾಲಪ್ಪ ಮುಖ್ಯ ಅತಿಥಿಗಳಾಗಿ ಆಗಮಿಸುವರು.