ನಗರದ ವಿವಿಧ ವೃತ್ತದಲ್ಲಿ ಭೀಮ್ ಸೇನೆಯಿಂದ ಪಥಸಂಚಲನ

ದಾವಣಗೆರೆ, ಏ.14- ನಗರದ ಅಂಬೇಡ್ಕರ್ ವೃತ್ತದಲ್ಲಿ ಶುಕ್ರವಾರ ಕರ್ನಾಟಕ ಭೀಮ್ ಸೇನೆಯಿಂದ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ 132ನೇ ಜಯಂತ್ಯೋತ್ಸವದ ಪ್ರಯುಕ್ತ ಅಂಬೇಡ್ಕರ್ ಪುತ್ಥಳಿಗೆ ಹಾಲಿನ ಅಭಿಷೇಕ ಮಾಡುವ ಜೊತೆಗೆ, ಮಾಲಾರ್ಪಣೆ ಮಾಡಿ ಭಾವಚಿತ್ರದ ಅದ್ದೂರಿ ಮೆರವಣಿಗೆ ನಡೆಸಲಾಯಿತು.

ಈ ವೇಳೆ ಸೇನೆಯ ಜಿಲ್ಲಾಧ್ಯಕ್ಷ ಆರ್. ಸೂರ್ಯನಾರಾಯಣ್ ಮಾತನಾಡಿ, ದೇಶದಲ್ಲಿನ ಸಾಮಾಜಿಕ ಅಸಮಾನತೆ ಹೋಗಲಾಡಿಸಲು ಹಗಲಿರುಳು ಶ್ರಮಿಸಿ ಸಮ ಸಮಾಜದ ಬಲವರ್ಧನೆಗೆ ದಿಟ್ಟತನದಿಂದ ಹೋರಾಡಿದವರು ಡಾ. ಬಿ. ಆರ್. ಅಂಬೇಡ್ಕರ್ ಅವರು.  ದೇಶದ ಸಾಮಾಜಿಕ, ರಾಜಕೀಯ, ಶೈಕ್ಷಣಿಕ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರಗಳ ಜ್ವಲಂತ ಸಮಸ್ಯೆಗಳಿಗೆ ವೈಜ್ಞಾನಿಕ ಸುಧಾರಣೆಗಳನ್ನು ಆವಿಷ್ಕರಿಸುವ ಮೂಲಕ ದೇಶದ ಭದ್ರತೆಗೆ ಸಂವಿಧಾನವನ್ನು ರಚಿಸಿದ್ದಾರೆ. ಅವರ ಮೌಲ್ಯಯುತ ಚಿಂತನೆ ಮತ್ತು ಸಾಧನೆಯನ್ನು ಯುವ ಜನಾಂಗ ಸ್ಮರಿಸಿಕೊಂಡು ಹೊಸತನದ ಸಮಾಜಕ್ಕೆ ಸ್ವತಂತ್ರ ಮನಸ್ಸಿನಂದ ತೆರೆದುಕೊಳ್ಳಬೇಕಿದೆ ಎಂದರು.

ಮೆರವಣಿಗೆಯು ಅಂಬೇಡ್ಕರ್ ವೃತ್ತದಿಂದ ಪ್ರಾರಂಭವಾಗಿ ಜಯದೇವ ವೃತ್ತ, ಗಾಂಧೀ ವೃತ್ತ, ಪಿ.ಬಿ ರಸ್ತೆ, ಎವಿಕೆ ಕಾಲೇಜ್ ರಸ್ತೆ, ನಾಯಕರ ಹಾಸ್ಟೆಲ್‌ ರಸ್ತೆ ಮಾರ್ಗವಾಗಿ ಸಂಚರಿಸಿ ಮರಳಿ  ಅಂಬೇಡ್ಕರ್ ವೃತ್ತದಲ್ಲಿ‌ ಕೊನೆಗೊಂಡಿತು.

ಈ ಸಂದರ್ಭದಲ್ಲಿ ಸೇನೆಯ ಚಂದ್ರಪ್ಪ, ಮೈಲಾರಿ, ಸಾಗರ್‌ ಎಲ್‌.ಹೆಚ್, ರಂಗನಾಥ್, ವಿನಾಯಕ, ಗಣೇಶ್,‌ ಸಂತೋಷ್‌ ಎಂ, ರಮೇಶ್‌ ಆರ್‌, ರಾಘವೇಂದ್ರ ಕೆ ಸೇರಿದಂತೆ ಮಂಗಳಮುಖಿಯರು, ದಮನಿತ ಮಹಿಳೆಯರು, ವಿವಿಧ ಸಂಘಟನೆಯ ಪದಾಧಿಕಾರಿಗಳು, ಮುಖಂಡರುಗಳು, ಶಾಲಾ ವಿದ್ಯಾರ್ಥಿಗಳು ಭಾಗವಹಿಸಿದ್ದರು.

error: Content is protected !!