ವಡ್ನಾಳ್ ರಾಜಣ್ಣ ಮಾರ್ಗದರ್ಶನದಲ್ಲಿ ಚುನಾವಣೆ

ವಡ್ನಾಳ್ ರಾಜಣ್ಣ ಮಾರ್ಗದರ್ಶನದಲ್ಲಿ ಚುನಾವಣೆ - Janathavaniಚನ್ನಗಿರಿ ಕಾಂಗ್ರೆಸ್ ಅಭ್ಯರ್ಥಿ ಶಿವಗಂಗಾ ಬಸವರಾಜ್

ಚನ್ನಗಿರಿ, ಏ.14- ಕ್ಷೇತ್ರದಲ್ಲಿ ಕಳೆದ 5 ವರ್ಷದಿಂದ ಕಾಂಗ್ರೆಸ್ ಪಕ್ಷ ಸಂಘಟಿಸುವುದು ಗಮನಿಸಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ, ಶಾಮನೂರು ಮಲ್ಲಿಕಾರ್ಜುನ್ ಆಶೀರ್ವಾದದಿಂದ ಕ್ಷೇತ್ರದಲ್ಲಿ ಟಿಕೆಟ್ ದೊರೆತಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಬಸವರಾಜ ವಿ.ಶಿವಗಂಗಾ ತಿಳಿಸಿದ್ದಾರೆ. 

ಪಟ್ಟಣದ ತಮ್ಮ ನಿವಾಸದಲ್ಲಿ ಮೊನ್ನೆ ನಡೆದ ಕಾರ್ಯಕರ್ತರ ಸಭೆ ಉದ್ದೇಶಿಸಿ ಮಾತನಾಡಿದ ಅವರು, ಮಾಜಿ ಶಾಸಕ ವಡ್ನಾಳ್ ರಾಜಣ್ಣ ಮಾರ್ಗದರ್ಶನದಲ್ಲೇ ಚುನಾವಣೆ ನಡೆಸಲಾಗುವುದು ಎಂದು ಹೇಳಿದರು.

ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ಬಯಿಸಿ, 8 ಮಂದಿ ಆಕಾಂಕ್ಷಿತರು ಕೆಪಿಸಿಸಿಗೆ ಅರ್ಜಿ ಸಲ್ಲಿಸಿದ್ದರು. ಈ ಎಂಟು ಜನರಲ್ಲಿ ಪಕ್ಷ ನನ್ನನ್ನು ಗುರುತಿಸಿ, ಅಭ್ಯರ್ಥಿಯಾಗಿ ಘೋಷಿಸಿದ್ದು, ಸಹಜವಾಗಿಯೇ ಇನ್ನುಳಿದವರಿಗೆ ಬೇಸರ ತಂದಿದೆ. ಇನ್ನುಳಿದ 7 ಮಂದಿ ನನ್ನ ಸಹೋದರರೊಂದಿಗೆ ಚರ್ಚೆ ನಡೆಸಿದ್ದು, ಎಲ್ಲರ ಸಹಕಾರದಿಂದ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ ಎಂದರು.

ವಿರೋಧ ಪಕ್ಷಕ್ಕಿಂತ ನಾವು ಯಾವುದರಲ್ಲೂ ಕಡಿಮೆ ಇಲ್ಲ. ಪಕ್ಷದ ಕಾರ್ಯಕರ್ತರು ಯಾವುದಕ್ಕೂ ಹೆದರದೇ ಪಕ್ಷ ಸಂಘಟನೆಯಲ್ಲಿ ತೊಡಗಿಕೊಂಡು ಕ್ಷೇತ್ರದ ಅಭಿವೃದ್ಧಿ ಬಗ್ಗೆ ನನ್ನದೇ ಆಲೋಚನೆಗಳಿದ್ದು, ನಿಮ್ಮೆಲ್ಲರ ಸಹಕಾರದಿಂದ ಚನ್ನಗಿರಿ ಕ್ಷೇತ್ರ ಮತ್ತಷ್ಟು ಅಭಿವೃದ್ಧಿಪಡಿಸೋಣ ಎಂದರು.

ಪುರಸಭೆ ಸದಸ್ಯರಾದ ಜಿ.ನಿಂಗಪ್ಪ, ಸೈಯದ್ ಗೌಸ್‌ಪೀರ್, ಮಂಜುನಾಥ್ ಸೇರಿದಂತೆ ಕಾರ್ಯಕರ್ತರು, ಅಭಿಮಾನಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.

error: Content is protected !!