ಜಗಳೂರು, ಏ.14- ಡಾ.ಬಿ.ಆರ್.ಅಂಬೇಡ್ಕರ್, ಸಾಮಾಜಿಕ ನ್ಯಾಯ ಮತ್ತು ಅಸ್ಪೃಶ್ಯತಾ ನಿವಾರಣೆಗಾಗಿ ಹೋರಾಡಿದ ಮಹಾನ್ ನಾಯಕರು ಎಂದು ತಹಶೀಲ್ದಾರ್ ಜಿ.ಸಂತೋಷ್ ಕುಮಾರ್ ತಿಳಿಸಿದರು.
ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ನೂತನವಾಗಿ ನಿರ್ಮಿಸಿದ ಡಾ.ಬಿ.ಆರ್.ಬಾಬಾ ಸಾಹೇಬ್ ಅಂಬೇಡ್ಕರ್ ಪುತ್ಥಳಿಗೆ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಮತ್ತು ಪುತ್ಥಳಿ ಸಮಿತಿಯಿಂದ ಇಂದು ಬೆಳಿಗ್ಗೆ ಮಾಲಾರ್ಪಣೆ ಮಾಡಿ, ನಂತರ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಸರಳವಾಗಿ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು.
ಹೋರಾಟಗಾರ ಅಂಬೇಡ್ಕರ್ ಅವರು, ಕೆಳಜಾತಿಯ ಮಹಾರ್ ಕುಟುಂಬದಲ್ಲಿ ಜನಿಸಿದರು. ಅವರು ದೇಶಕ್ಕಾಗಿ ಸಂವಿಧಾನವನ್ನು ರೂಪಿಸಿದ ಮಹಾನ್ ನಾಯಕರಾಗಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಚುನಾವಣಾಧಿಕಾರಿ ಎಸ್.ರವಿ, ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಬಿ.ಮಹೇಶ್ವರಪ್ಪ. ತಾ.ಪಂ ಇ.ಓ. ಚಂದ್ರಶೇಖರ್, ಪೊಲೀಸ್ ಸಬ್ಇನ್ಸ್ಪೆಕ್ಟರ್ ಶ್ರೀನಿವಾಸ್, ಪ.ಪಂ ಮುಖ್ಯ ಅಧಿಕಾರಿ ಲೋಕ್ಯಾನಾಯ್ಕ, ಆರ್.ಐ.ಕುಬೇರ ನಾಯ್ಕ, ದಲಿತ ಮುಖಂಡರಾದ ಪೂಜಾರ್ ಸಿದ್ದಪ್ಪ, ಸತೀಶ್, ಕುಬೇಂದ್ರಪ್ಪ, ದೇವೇಂದ್ರಪ್ಪ, ಬಸವರಾಜಪ್ಪ ಮುಖಂಡರಾದ ಬಡಪ್ಪ, ಬಾಬು, ತಿಪ್ಪೇಸ್ವಾಮಿ ಸೇರಿದಂತೆ ಸಾರ್ವಜನಿಕರು ಉಪಸ್ಥಿತರಿದ್ದರು.