ನೀತಿ ಸಂಹಿತೆ ಉಲ್ಲಂಘನೆ; ಮದ್ಯ, 2.5 ಲಕ್ಷ ನಗದು ವಶ

ದಾವಣಗೆರೆ, ಏ.21- ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ನೀತಿ ಸಂಹಿತೆ ಜಾರಿಯಲ್ಲಿದ್ದು, ಜಿಲ್ಲೆಯಾದ್ಯಂತ ಕಟ್ಟುನಿಟ್ಟಿನ ಚೆಕ್‌ಪೋಸ್ಟ್ ವ್ಯವಸ್ಥೆ ಮಾಡಲಾಗಿದೆ. ಏಪ್ರಿಲ್ 20 ರಂದು ರೂ.3,29,571 ಮೌಲ್ಯದ 391.025 ಲೀ ಮದ್ಯ ಮತ್ತು ರೂ.2,50,000 ನಗದು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಶಿವಾನಂದ ಕಾಪಶಿ ತಿಳಿಸಿದ್ದಾರೆ.

ಜಿಲ್ಲೆಯಾದ್ಯಂತ ವಿವಿಧ ಚೆಕ್‌ಪೋಸ್ಟ್‍ಗಳಲ್ಲಿ ಕಟ್ಟುನಿಟ್ಟಿನ ತಪಾಸಣೆ ಕೈಗೊಳ್ಳಲಾಗುತ್ತಿದ್ದು, ಇದುವರೆಗೆ ರೂ.92,11,648 ನಗದು, ರೂ.2,35,68,475 ಮೌಲ್ಯದ 20186.12 ಲೀ ಮದ್ಯ, 3.853 ಕೆ.ಜಿ ಮಾದಕ ವಸ್ತು ಅಂದಾಜು ಮೌಲ್ಯ ರೂ.71,610, ರೂ.54,26,735 ಮೌಲ್ಯದ ಇತರೆ ವಸ್ತುಗಳು ಸೇರಿದಂತೆ ಒಟ್ಟು ರೂ.3.82 ಕೋಟಿಯಷ್ಟು ನಗದು ಮತ್ತು ಇತರೆ ವಸ್ತುಗಳನ್ನು ನೀತಿ ಸಂಹಿತೆ ಆರಂಭವಾದಾಗಿನಿಂದ ಇಲ್ಲಿಯವರೆಗೆ ವಶಪಡಿಸಿಕೊಳ್ಳಲಾಗಿದೆ. 

ಏ.20 ರಂದು ವಶಪಡಿಸಿಕೊಂಡ ಮದ್ಯದಲ್ಲಿ 5.22 ಲೀ ಪೊಲೀಸ್ ಇಲಾಖೆ ಮತ್ತು 385.805 ಲೀ ಅಬಕಾರಿ ಇಲಾಖೆಯಿಂದ ಕಾರ್ಯಾಚರಣೆ ಮಾಡಲಾಗಿದೆ.

error: Content is protected !!