ದೊಡ್ಡಪೇಟೆಯಲ್ಲಿ ಇಂದು ಬಸವ ಜಯಂತಿ

ಶ್ರೀ ಜಗಜ್ಯೋತಿ ಬಸವೇಶ್ವರರ 112ನೇ ವರ್ಷದ ಜಯಂತ್ಯೋತ್ಸವವು  ದಾವಣಗೆರೆ ದೊಡ್ಡಪೇಟೆಯ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಇಂದು ನಡೆಯಲಿದೆ. ಇಂದು ಬೆಳಿಗ್ಗೆ 9 ಗಂಟೆಗೆ ಮಹಿಳೆಯರಿಂದ ತೊಟ್ಟಿಲು ಪೂಜಾ ಕಾರ್ಯಕ್ರಮ, ಸಂಜೆ 6 ಗಂಟೆಗೆ ಹೂವಿನ ಅಲಂಕಾರ ಅಡ್ಡ ಪಲ್ಲಕ್ಕಿಯಲ್ಲಿ ಶ್ರೀ ಬಸವೇಶ್ವರರ ಬೆಳ್ಳಿ ಪುತ್ಥಳಿಯ ಭವ್ಯ ಮೆರವಣಿಗೆ ಏರ್ಪಾಡಾಗಿದೆ.

ನಾಳೆ ಸೋಮವಾರ ಮಧ್ಯಾಹ್ನ 12.30ಕ್ಕೆ ಸಾರ್ವಜನಿಕರಿಗೆ ಮಹಾದಾಸೋಹ ಆಯೋಜನೆಗೊಂಡಿದೆ. ದೊಡ್ಡಪೇಟೆ ಶ್ರೀ ಬಸವೇಶ್ವರ ಸೇವಾ ಸಂಘದ ಅಧ್ಯಕ್ಷರೂ ಆಗಿರುವ ಕೈಗಾರಿಕೋದ್ಯಮಿ ಅಥಣಿ ಎಸ್. ವೀರಣ್ಣ ಮತ್ತು ಸಹೋದರರು ದಾಸೋಹದ ಸೇವಾರ್ಥಿಗಳಾಗಿದ್ದಾರೆ.

error: Content is protected !!