ದಾವಣಗೆರೆ, ಮೇ 2 – ಜಿಲ್ಲಾ ಪಂಚಾಯತ್ ಹಾಗೂ ದಾವಣಗೆರೆ ತಾಲ್ಲೂಕು ಪಂಚಾಯಿತಿ ವತಿಯಿಂದ ಗ್ರಾಮೀಣ ಪ್ರದೇಶದ ಮತದಾರರಿಗೆ ಮತದಾನದ ಜಾಗೃತಿ ಮೂಡಿಸುವ ಸಲುವಾಗಿ ಬೈಕ್ ರ್ಯಾಲಿಯನ್ನು ಏರ್ಪಡಿಸಲಾಗಿದ್ದು, ರ್ಯಾಲಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸುರೇಶ್ ಹಿಟ್ನಾಳ್ ಚಾಲನೆ ನೀಡಿದರು.
ಜಿಲ್ಲಾ ಪಂಚಾಯತ್ ಕಚೇರಿ ಯಿಂದ ಆರಂಭವಾದ ರ್ಯಾಲಿಯ ಮೂಲಕ ಶಿರಮಗೊಂಡನ ಹಳ್ಳಿ, ಹದಡಿ, ಕೈದಾಳೆ, ಶ್ಯಾಗಲೆ, ಕಂದಗಲ್ಲು, ಬಾಡ, ಅತ್ತಿಗೆರೆ, ಕುರ್ಕಿ, ತೋಳಹು ಣಸೆ ಮಾರ್ಗವಾಗಿ ಚಲಿಸಿ ಜಾಗೃತಿ ಮೂಡಿಸಲಾಯಿತು. ಕಾರ್ಯಕ್ರಮ ದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಮಲ್ಲಾನಾಯ್ಕ್, ತಾಲ್ಲೂಕು ಕಾರ್ಯ ನಿರ್ವಹಣಾಧಿಕಾರಿ ಆನಂದ್, ಜಿಲ್ಲಾ ಪಂಚಾಯತ್ ಸಹಾಯಕ ನಿರ್ದೇಶಕ ಕರಿಬಸಪ್ಪ ಕೆ.ಟಿ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.