ನಗರದಲ್ಲಿ ಸಿಲ್ಕ್ ಇಂಡಿಯಾ ಮೇಳ ಆರಂಭ

ನಗರದಲ್ಲಿ ಸಿಲ್ಕ್  ಇಂಡಿಯಾ ಮೇಳ ಆರಂಭ

ದಾವಣಗೆರೆ, ಮೇ 2- ಭಾರತದ ಎಲ್ಲಾ ರಾಜ್ಯಗಳಿಂದ ಪರಿಶುದ್ಧ ರೇಷ್ಮೆ ಸೀರೆಗಳ ಬೃಹತ್‌ ಪ್ರದರ್ಶನ ಮತ್ತು ಮಾರಾಟ ಮೇಳವು  ನಗರದ ಹೋಟೆಲ್ ಪೂಜಾ ಇಂಟರ್‌ನ್ಯಾಷನಲ್‌ ನಲ್ಲಿ ಇಂದು ಆರಂಭಗೊಂಡಿದ್ದು, ಇದೇ ದಿನಾಂಕ 7ರವರೆಗೆ ನಡೆಯಲಿದೆ.

‘ಅಭಿವೃದ್ಧಿ’ ಸಂಸ್ಥೆಯನ್ನು ಭಾರತದಲ್ಲಿರುವ ಕುಶಲಕರ್ಮಿಗಳು ಮತ್ತು ನೇಕಾರರ ಶ್ರೋಯೋಭಿವೃದ್ಧಿಗಾಗಿ ಮೈಸೂರಿನಲ್ಲಿ ಸ್ಥಾಪಿಸಲಾಗಿದೆ. ನೇಕಾರರು ಮತ್ತು ಕುಶಲಕರ್ಮಿಗಳು ಉತ್ಪಾದಿಸುವ ಉತ್ಪನ್ನಗಳಿಗೆ ದೇಶದ ಮುಖ್ಯ ನಗರಗಳಲ್ಲಿ ಮಾರಾಟ ಮೇಳವನ್ನು ಆಯೋಜಿಸುವ ಮೂಲಕ ನೇರವಾಗಿ ಅವರ ಉತ್ಪನ್ನಗಳು ಗ್ರಾಹಕರಿಗೆತಲುಪಿಸುವಂತೆ ವ್ಯವಸ್ಥೆ ಮಾಡುವುದು ಮತ್ತು ಮಧ್ಯವರ್ತಿಗಳ ಹಾವಳಿಯಿಲ್ಲದೆ ನೇಕಾರರೇ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಿ ಲಾಭವನ್ನು ಹೆಚ್ಚು ಗಳಿಸುವಂತೆ ಮಾಡುವಉದ್ದೇಶವನ್ನು ಸಂಸ್ಥೆಯು ಹೊಂದಿದೆ.

ಈ ಮೇಳದಲ್ಲಿ ಕಾಶ್ಮೀರದಿಂದ ಕಾಂಚಿಪುರಂ ರೇಷ್ಮೆ ಸೀರೆ ಉತ್ಪಾದಕರು, ರೇಷ್ಮೆ ಸೀರೆ ವಿನ್ಯಾಸಗಾರರು ಮತ್ತು ರೇಷ್ಮೆ ಸಹಕಾರ ಸಂಘಗಳು 60 ಕ್ಕೂ ಹೆಚ್ಚಿನ ಮಳಿಗೆಗಳನ್ನು ತೆರೆದಿವೆ.  ಮೇಳದಲ್ಲಿ ತಸ್ಸರ್‌ರೇಷ್ಮೆ ಸೀರೆಗಳು, ಕ್ರೇಪ್ ಮತ್ತುಜಾರ್ಜೆಟ್ ಸಿಲ್ಕ್ ಸೀರೆಗಳು, ಅರಿಣಿರೇಷ್ಮೆ ಸೀರೆಗಳು, ಧರ್ಮಾವರಂ ಸೀರೆಗಳು, ಕಾಂಚಿಪುರ ಸಿಲ್ಕ್ ಮತ್ತು ಮದುವೆ ಸೀರೆಗಳು, ರಾ ಸಿಲ್ಕ್ ಮತ್ತು ಕೋಸಾ ಸೀರೆಗಳು, ಕಲ್ಕೊತ್ತಾ ಗಣಪತಿ ಸೀರೆಗಳು, ಢಾಕ ಸೀರೆಗಳು, ಡಿಸೈನರ್‌ ಎಂಬ್ರಾಯಿಡರಿ ಸೀರೆ ಮತ್ತು ಡ್ರೆಸ್, ಬಲ್‌ಚೂರಿ ರೇಷ್ಮೆ, ಮಟ್ಕಾ ಸೀರೆಗಳು, ಪ್ರೀಂಟೆಡ್ ಸೀರೆಗಳು, ಪಶ್ಮೀನಾ ಸೀರೆಗಳು ಈ ವಸ್ತುಪ್ರದರ್ಶನದಲ್ಲಿ ಪ್ರದರ್ಶಿಸಿ ಮಾರಾಟ ಮಾಡುವರು.  

error: Content is protected !!