ಎಸ್ಸೆಸ್ಸೆಲ್ಸಿಯಲ್ಲಿ ಲಯನ್ಸ್‌ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

ದಾವಣಗೆರೆ, ಮೇ 10 – ನಗರದ ದೇವರಾಜ ಅರಸು ಬಡಾವಣೆ `ಬಿ’ ಬ್ಲಾಕ್‌ನಲ್ಲಿರುವ ಲಯನ್ಸ್‌ ಆಂಗ್ಲ ಮಾಧ್ಯಮ ಶಾಲೆಗೆ 2022-23ನೇ ಸಾಲಿನ  ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ. 100ರಷ್ಟು ಫಲಿತಾಂಶ ಲಭಿಸಿದೆ.

ಶಾಲೆಯ ವಿದ್ಯಾರ್ಥಿನಿ ಸುಹಾಸಿನಿ 598 ಅಂಕಗಳನ್ನು ಗಳಿಸಿರುತ್ತಾರೆ. 7 ಡಿಸ್ಟಿಂಕ್ಷನ್‌, 19 ಪ್ರಥಮ ದರ್ಜೆ, 2 ದ್ವಿತೀಯ ದರ್ಜೆಯಲ್ಲಿ ವಿದ್ಯಾರ್ಥಿಗಳು ಉತ್ತೀರ್ಣರಾಗಿರುತ್ತಾರೆ. ವಿದ್ಯಾರ್ಥಿಗಳ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು, ಸಹ ಶಿಕ್ಷಕರು, ಸಿಬ್ಬಂದಿ ವರ್ಗ, ಲಯನ್ಸ್‌ ಟ್ರಸ್ಟ್‌, ಲಯನ್ಸ್‌ ಕ್ಲಬ್‌ ಅಧ್ಯಕ್ಷರು ಮತ್ತು ಸದಸ್ಯರು ಅಭಿನಂದಿಸಿದ್ದಾರೆ. 

error: Content is protected !!