ದಾವಣಗೆರೆ, ಮೇ 11- ನಗರದ ಯರಗುಂಟೆ ಹೊಸ ಬಡಾ ವಣೆ, ಕೊಂಡಜ್ಜಿ ರಸ್ತೆಯಲ್ಲಿರುವ ಶ್ರೀ ಆಂಜನೇಯ ಪ್ರೌಢಶಾಲೆಯು ಅನುದಾನಿತವಾಗಿದ್ದು, 2022-23ನೇ ಸಾಲಿನಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ. 90 ರಷ್ಟು ಫಲಿತಾಂಶ ಬಂದಿದೆ.
ಪರೀಕ್ಷೆಗೆ ಹಾಜರಾದ ಇಬ್ಬರು ವಿದ್ಯಾರ್ಥಿಗಳಿಗೆ ಶೇ. 85 ರಷ್ಟು ಅಂಕಗಳನ್ನು ಪಡೆದಿದ್ದಾರೆ. 10 ವಿದ್ಯಾರ್ಥಿಗಳು ಪ್ರಥಮ ದರ್ಜೆ, 11 ವಿದ್ಯಾರ್ಥಿಗಳು ದ್ವಿತೀಯ ದರ್ಜೆ, 2 ವಿದ್ಯಾರ್ಥಿಗಳು ತೃತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.
ಶಾಲೆಗೆ ಉತ್ತಮ ಫಲಿತಾಂಶ ನೀಡಿದ ವಿದ್ಯಾರ್ಥಿಗಳಿಗೆ ಆಡಳಿತ ಮಂಡಳಿಯ ಕಾರ್ಯದರ್ಶಿ ಜಿ.ಟಿ. ತಿಮ್ಮಪ್ಪ, ಮುಖ್ಯ ಶಿಕ್ಷಕ ಠಾಕ್ರ್ಯ ನಾಯ್ಕ, ಎಲ್.ಕೆ. ಮತ್ತು ಸಿಬ್ಬಂದಿ ವರ್ಗದವರು ಶುಭ ಹಾರೈಸಿದ್ದಾರೆ.