ವಿಶ್ವಕರ್ಮ ಸಮಾಜ ಸಂಘ ಹಾಗೂ ಜಿಲ್ಲೆಯ ವಿಶ್ವಕರ್ಮ ಸಮಾಜದ ಎಲ್ಲಾ ಸಂಘ-ಸಂಸ್ಥೆಗಳ ಸಹಯೋಗದಲ್ಲಿ 40 ನೇ ವರ್ಷದ ಸಾಮೂಹಿಕ ಉಪನಯನ ಮತ್ತು ವಿವಾಹ ಮಹೋತ್ಸವ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮವು ಕಾಳಿಕಾಂಬ ವಿಶ್ವಕರ್ಮ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ.
ಇಂದು ಬೆಳಿಗ್ಗೆ 4.12 ರಿಂದ 5.10 ರವರೆಗೆ ಯಜ್ಞೋಪವೀತ ಧಾರಣೆ ಮತ್ತು ಬ್ರಹ್ಮೋಪದೇಶ, ಬೆಳಿಗ್ಗೆ 8.30 ರಿಂದ 9.12 ರವರೆಗೆ ಸಾಮೂಹಿಕ ವಿವಾಹ ನಡೆಯಲಿವೆ ಎಂದರು.
ಬೆಳಿಗ್ಗೆ 11 ಕ್ಕೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಅಂತರವಳ್ಳಿ ಶಾಖಾ ಮಠದ ಆನಗೋಡು ಶ್ರೀ ಭಾಸ್ಕರ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ವಿಶ್ವಕರ್ಮ ಸಮಾಜ ಸಂಘದ ಅಧ್ಯಕ್ಷ ಬಸಾಪುರದ ಬಿ. ನಾಗೇಂದ್ರಚಾರ್ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಜಿಲ್ಲಾಧಿಕಾರಿ ಶಿವಾ ನಂದ ಕಾಪಶಿ, ಮಹಾನಗರ ಪಾಲಿಕೆ ಮೇಯರ್ ವಿನಾಯಕ ಪೈಲ್ವಾನ್, ಜವಳಿ ವರ್ತಕ ಬಿ.ಸಿ. ಉಮಾಪತಿ, ದಾವಣಗೆರೆ-ಹರಿಹರ ಅರ್ಬ ನ್ ಬ್ಯಾಂಕ್ ಅಧ್ಯಕ್ಷ ಎನ್.ಎ. ಮುರುಗೇಶ್, ಸಂಘದ ಗೌರವಾಧ್ಯಕ್ಷ ಬಿ.ಎಲ್. ಸೀತಾರಾಮಚಾರ್, ವಿಶ್ವಕರ್ಮ ಸೊಸೈಟಿ ಅಧ್ಯಕ್ಷ ಬಿ.ವಿ. ಶಿವಾನಂದ ಸೇರಿದಂತೆ ಇತರರು ಭಾಗವಹಿಸಲಿದ್ದಾರೆ.