ದಾವಣಗೆರೆ, ಮೇ 20- ರಾಷ್ಟ್ರೀಯ ಆಹಾರ ಭದ್ರತಾ ಯೋಜನೆಯಡಿ ವಿವಿಧ ವರ್ಗದ ಪಡಿತರ ಚೀಟಿದಾರರಿಗೆ ಮೇ ಮಾಹೆಗೆ ಅನ್ವಯವಾಗುವಂತೆ ಉಚಿತ ಪಡಿತರ ಧಾನ್ಯ ಪಡೆಯಲು ನ್ಯಾಯಬೆಲೆ ಅಂಗಡಿಗಳಿಗೆ ಹಂಚಿಕೆ ಮಾಡಲಾಗಿದೆ.
ಅಂತ್ಯೋದಯ ಪಡಿತರ ಚೀಟಿದಾರಿಗೆ 21 ಕೆ.ಜಿ ಅಕ್ಕಿ ಮತ್ತು ಪ್ರತಿ ಕಾರ್ಡಿಗೆ 14 ಕೆ.ಜಿ ರಾಗಿ ಒಟ್ಟು 35 ಕೆ.ಜಿ , ಆದ್ಯತಾ ಪಡಿತರ ಚೀಟಿದಾರರಿಗೆ 4 ಕೆ.ಜಿ ಅಕ್ಕಿ ಮತ್ತು ಪ್ರತಿ ಸದಸ್ಯರಿಗೆ 2 ಕೆ.ಜಿ ರಾಗಿ ಒಟ್ಟು 6 ಕೆ.ಜಿ ಆಹಾರ ಧಾನ್ಯ ಉಚಿತವಾಗಿ ವಿತರಿಸಲಾಗುತ್ತದೆ ಹಾಗೂ ಪ್ರತಿ ಕೆ.ಜಿ ಗೆ ರೂ 15 ರಂತೆ ಒಪ್ಪಿಗೆ ನೀಡಿದ ಎ.ಪಿ.ಎಲ್ ಏಕಸದಸ್ಯ ಪಡಿತರ ಚೀಟಿದಾರರಿಗೆ 5 ಕೆ.ಜಿ, ಎರಡು ಮತ್ತು ಹೆಚ್ಚಿನ ಸದಸ್ಯ ಹೊಂದಿರುವವರಿಗೆ 10 ಕೆ.ಜಿ ಅಕ್ಕಿಯನ್ನು ವಿತರಿಸಲಾಗುವುದು.
ನ್ಯಾಯಬೆಲೆ ಅಂಗಡಿಗಳಲ್ಲಿ ಬಯೋ ನೀಡುವ ಮೂಲಕ ರಶೀದಿ ಪಡೆದು ಕಾರ್ಡಿಗೆ ಬರಬೇಕಾದ ಆಹಾರ ಧಾನ್ಯಗಳನ್ನು ಪಡೆದುಕೊಳ್ಳಲು
ಆಹಾರ, ನಾಗರಿಕ ಸರಬರಾಜು ಇಲಾಖೆ ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.