ಜಗಳೂರು, ಮೇ 20- ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಸಂಪುಟ ಪ್ರಮಾಣ ವಚನ ಸ್ವೀಕಾರದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಪಟ್ಟಣದ ಮಹಾತ್ಮ ಗಾಂಧಿ ವೃತ್ತದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ, ಸಂಭ್ರಮಿಸಿದರು. ಮುಖಂಡ ಮಾಳಮ್ಮ ನಹಳ್ಳಿ ವೆಂಕಟೇಶ್ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಆಡಳಿತ ಸರ್ಕಾರ ಜನರ ಸಂಪೂರ್ಣ ಬಹುಮತ ದಿಂದ ಆಯ್ಕೆಯಾಗಿದ್ದು, ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವುದು ಹಾಗೂ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಬಿ.ದೇವೇಂದ್ರಪ್ಪ ಶಾಸಕರಾಗಿ ಆಯ್ಕೆಯಾಗಿರುವುದು ಕಾರ್ಯ ಕರ್ತರಲ್ಲಿ ಹರ್ಷ ತಂದಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಸದಸ್ಯರಾದ ರಮೇಶ್ ರೆಡ್ಡಿ, ಶಕೀಲ್ ಅಹಮ್ಮದ್, ರವಿಕುಮಾರ್, ಮುಖಂಡರಾದ ಡಿ.ಆರ್.ಹನುಮಂತಪ್ಪ, ನಿವೃತ್ತ ಉಪನ್ಯಾಸಕ ತಿಮ್ಮರಾಜ್, ಶೇಖರಪ್ಪ, ಚಂದ್ರಪ್ಪ ಸೇರಿದಂತೆ ಭಾಗವಹಿಸಿದ್ದರು.