ದಾವಣಗೆರೆ, ಮೇ 20- ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಆಶ್ರಯದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆದು ಉತ್ತೀರ್ಣರಾಗಿರುವ ಪ್ರತಿಭಾವಂತ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಸಲ್ಲಿಸಲು ಬರುವ ಜೂನ್ 10ರವರೆಗೆ ವಿಸ್ತರಿಸಲಾಗಿದೆ. ಪ್ರಥಮ ಭಾಷೆ ಕನ್ನಡದಲ್ಲಿ ಅತೀ ಹೆಚ್ಚು ಅಂಕ ಪಡೆದವರಿಗೆ `ಕನ್ನಡ ಕೌಸ್ತುಭ’, `ಸರಸ್ವತಿ ಪುರಸ್ಕಾರ’ ಕರ್ನಾಟಕ ರಾಜ್ಯ ವ್ಯಾಪ್ತಿಯಲ್ಲಿ ರಾಜ್ಯ ಪ್ರಶಸ್ತಿ, ದಾವಣಗೆರೆ ಜಿಲ್ಲಾ ವ್ಯಾಪ್ತಿಯಲ್ಲಿ `ಕನ್ನಡ ಕುವರ-ಕುವರಿ’ ಜಿಲ್ಲಾ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಸಂಸ್ಥೆಯ ಅಧ್ಯಕ್ಷ ಕೆ.ಹೆಚ್.ಮಂಜುನಾಥ್ ತಿಳಿಸಿದ್ದಾರೆ. ವಿವರಕ್ಕೆ ಸಂಪರ್ಕಿಸಿ : 9538732777, 9743897578, 9844691391.
January 11, 2025