`ಕೇರಳ ಸ್ಟೋರಿ’ ವೀಕ್ಷಣೆಗೆ ಆಹ್ವಾನ

ಕೇರಳದಲ್ಲಿ ನಡೆದ ನೈಜ ಘಟನೆ ಆಧಾರಿತ `ಕೇರಳ ಸ್ಟೋರಿ’ ಸಿನಿಮಾವನ್ನು ಉಚಿತವಾಗಿ ವೀಕ್ಷಿಸಲು ಇಂದು ಬೆಳಿಗ್ಗೆ 10 ಕ್ಕೆ ಮತ್ತು ಮಧ್ಯಾಹ್ನ 2 ಗಂಟೆಗೆ  ದಾವಣಗೆರೆಯ ತ್ರಿಶೂಲ್ ಚಿತ್ರಮಂದಿರದಲ್ಲಿ ಅವಕಾಶ ಕಲ್ಪಿಸಲಾಗಿದೆ. ಲವ್ ಜಿಹಾದ್‌ಗೆ ಬಲಿಯಾಗುತ್ತಿರುವ ಹಿಂದೂ ಧರ್ಮದ ಮಹಿಳೆಯರ ಜಾಗೃತಿಗಾಗಿ ಪ್ರೇರಣಾ ಯುವ ಸಂಸ್ಥೆ ಹಾಗೂ ಹಿಂದೂ ಜಾಗರಣಾ ವೇದಿಕೆ ಜಂಟಿ ಆಶ್ರಯದಲ್ಲಿ ಈ ವ್ಯವಸ್ಥೆ ಮಾಡಲಾಗಿದೆ ಎಂದು ಪಾಲಿಕೆ ಮಾಜಿ ಮೇಯರ್ ಎಸ್.ಟಿ.ವೀರೇಶ್ ತಿಳಿಸಿದ್ದಾರೆ.

error: Content is protected !!