ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ

ದಾವಣಗೆರೆ, ಮೇ 26- ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಪ್ರಥಮ ವರ್ಷ ಮತ್ತು ಲ್ಯಾಟರಲ್ ಎಂಟ್ರಿ ಮುಖಾಂತರ ನೇರವಾಗಿ 2 ನೇ ವರ್ಷದ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ  ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಗಣಿತ, ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರ ದೊಂದಿಗೆ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ರಬೇಕು. ಜವಳಿ ವಿಭಾಗದ ವೃತ್ತಿಪರ ಸ್ಕೀಮ್ ನಲ್ಲಿ 10+2 ಅರ್ಹತೆ ಹೊಂದಿರಬೇಕು. ಐ.ಐ.ಹೆಚ್.ಟಿ ನಡೆಸುವ ಗಣಿತ, ಭೌತಶಾಸ್ತ್ರ, ರಸಾಯನ ಶಾಸ್ತ್ರದಲ್ಲಿ ಬ್ರಿಡ್ಜ್ ಕೋರ್ಸ್ ಮಾಡಿರಬೇಕು.

ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಪ್ರಾಂಶುಪಾಲರು, ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ನರಸಾಪೂರ ಗದಗ,  ಬೆಟಗೇರಿ-587102 ಇವರಿಗೆ  ಇದೇ ದಿನಾಂಕ 31 ರೊಳಗಾಗಿ ಸಲ್ಲಿಸಬೇಕು. ವ್ಯಾಸಂಗದ ಸಮಯದಲ್ಲಿ ಪ್ರತಿ ವಿದ್ಯಾರ್ಥಿಗೆ ಪ್ರತಿ ತಿಂಗಳಿಗೆ ರೂ.2500 ರಂತೆ ಶಿಷ್ಯ ವೇತನ ನೀಡಲಾಗುವುದು.

ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ವಿವರಗಳಿಗಾಗಿ ಮತ್ತು ಅರ್ಜಿ ಫಾರಂಗಳಿಗಾಗಿ ಗದಗ ಜಿಲ್ಲೆಯ ನರಸಾಪೂರ ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ ಪ್ರಾಂಶುಪಾಲರು ದೂ.08192262362 ಅಥವಾ ಉಪ ನಿರ್ದೇಶಕರ ಕಚೇರಿ ಕೈಮಗ್ಗ ಮತ್ತು ಜವಳಿ ಇಲಾಖೆ ಜಿಲ್ಲಾ ಪಂಚಾಯತ್ ದಾವಣಗೆರೆ ಇಲ್ಲಿಗೆ   ಸಂಪರ್ಕಿಸಬಹುದೆಂದು ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

error: Content is protected !!