ರಂಗ ಶಿಕ್ಷಣ ಡಿಪ್ಲೋಮಾಕ್ಕೆ ಅರ್ಜಿ

ಸಾಣೇಹಳ್ಳಿ, ಮೇ 29- ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದಿರುವ ಇಲ್ಲಿನ ಶ್ರೀ ಶಿವಕುಮಾರ ರಂಗ ಪ್ರಯೋಗ ಶಾಲೆ ರಂಗಶಿಕ್ಷಣ ಡಿಪ್ಲೋಮಾಕ್ಕೆ ಅರ್ಜಿ ಆಹ್ವಾನಿಸಿದೆ. 

ಡಾ. ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಮಾರ್ಗದರ್ಶನದಲ್ಲಿ ನಡೆಯುತ್ತಿರುವ ಈ ಶಾಲೆಗೆ ಪ್ರವೇಶ ಬಯಸುವವರ ಕನಿಷ್ಟ ವಿದ್ಯಾರ್ಹತೆ ಎಸ್ಸೆಸ್ಸೆಲ್ಸಿ ಆಗಿದ್ದು, ಪದವೀಧರರಿಗೆ ಆದ್ಯತೆ ನೀಡಲಾಗುವುದು. 

ಭಾರತೀಯ ರಂಗಭೂಮಿ, ಪಾಶ್ಚಾತ್ಯ ರಂಗಭೂಮಿ, ಕನ್ನಡ ರಂಗಭೂಮಿ, ಸಾಹಿತ್ಯ ಪರಂಪರೆ, ಅಭಿನಯ, ಆಹಾರ್ಯ ಮತ್ತು ಶಿಕ್ಷಣದಲ್ಲಿ ರಂಗಭೂಮಿ ಕುರಿತಾದ ಸೈದ್ಧಾಂತಿಕ ಮತ್ತು ಪ್ರಾಯೋಗಿಕ ತರಗತಿಗಳು ಪ್ರಸಿದ್ಧ ರಂಗತಜ್ಞರು ಮತ್ತು ಅತಿಥಿ ಉಪನ್ಯಾಸಕರಿಂದ ನಡೆಯಲಿವೆ.

ಕಳರಿ, ಯೋಗ, ಕಥಕ್ಕಳಿ, ಯಕ್ಷಗಾನ, ಕಂಸಾಳೆ, ಹೆಜ್ಜೆಮೇಳ, ವೀರಗಾಸೆ, ಪ್ರಸಾಧನ, ಬೆಳಕಿನ ವಿನ್ಯಾಸ, ರಂಗ ವಿನ್ಯಾಸ, ವಸ್ತ್ರವಿನ್ಯಾಸ ಮುಂತಾದ ಕಾರ್ಯಾಗಾರಗಳ ಜೊತೆಗೆ ಕಾವ್ಯ, ಸಿನಿಮಾ, ಚಿತ್ರಕಲೆ, ವಚನ ಸಾಹಿತ್ಯ ಕುರಿತಾದ ಕಮ್ಮಟಗಳು ಮತ್ತು ನಾಲ್ಕರಿಂದ ಐದು ನಾಟಕಗಳ ಅಭ್ಯಾಸ ಪ್ರದರ್ಶನ ನಡೆಯಲಿವೆ.

ಆಸಕ್ತರು www.theatreschoolsanehalli.org  ಈ ವೆಬ್ ವಿಳಾಸದಲ್ಲಿ ಪ್ರವೇಶ ಅರ್ಜಿಗಳನ್ನು ಡೌನ್‍ಲೋಡ್ ಮಾಡಿ ಜೂನ್ 30 ರ ಒಳಗಾಗಿ `ಪ್ರಾಚಾರ್ಯರು, ಶ್ರೀ ಶಿವಕುಮಾರ ರಂಗಪ್ರಯೋಗಶಾಲೆ, ಸಾಣೇಹಳ್ಳಿ – 577515, ಹೊಸದುರ್ಗ ತಲ್ಲೂಕು, ಚಿತ್ರದುರ್ಗ ಜಿಲ್ಲೆ’ ವಿಳಾಸಕ್ಕೆ ಸಲ್ಲಿಸಬೇಕು. ವಿವರಕ್ಕೆ ಸಂಪರ್ಕಿಸುವ ಮೊಬೈಲ್ ಸಂಖ್ಯೆ 9448398144, 8861043553, 9482942394.

error: Content is protected !!