ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮಗಳು

ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮಗಳು

ಮಲೇಬೆನ್ನೂರು, ಮೇ 29 – ಪಟ್ಟಣದ ವಿವಿಧ ಶಾಲೆಗಳಲ್ಲಿ ಸೋಮವಾರ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮಗಳು ಸಂಭ್ರಮದಿಂದ ಜರುಗಿದವು.         

ಇಲ್ಲಿನ ಶ್ರೀ ಬೀರಲಿಂಗೇಶ್ವರ ಹಿರಿಯ ಪ್ರಾಥಮಿಕ ಮತ್ತು ಬಾಲಕರ ಹಾಗೂ ಬಾಲಕಿಯರ ಪ್ರೌಢಶಾಲೆಗಳಲ್ಲಿ ಶಾಲಾ ಪ್ರಾರಂಭೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ಹಾಗೂ ಸಿಹಿ ವಿತರಿಸಲಾಯಿತು. 

ವಿದ್ಯಾಸಂಸ್ಥೆಯ ಕಾರ್ಯದರ್ಶಿ ಬಿ. ಪಿ. ಕರಿಯಪ್ಪ ಹಾಗೂ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಡಿಕೆ ಕರಿಬಸಪ್ಪ, ಬಾಲಕರ ಪ್ರೌಢಶಾಲೆ ಮುಖ್ಯ ಶಿಕ್ಷಕ ಸಿ ಜಯಣ್ಣ, ಬಾಲಕಿಯರ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಮಂಜುನಾಥ್  ಹಾಗೂ ಸಹ ಶಿಕ್ಷಕರು, ಪೋಷಕರು ಮತ್ತು ವಿದ್ಯಾರ್ಥಿಗಳು ಈ ವೇಳೆ ಹಾಜರಿದ್ದರು.

error: Content is protected !!