ಜಿಎಂಐಟಿ ಪ್ಲೇಸ್ಮೆಂಟ್ ವಿಭಾಗದ ಸಹಯೋಗದೊಂದಿಗೆ ಜಿಎಂಎಸ್ ಅಕಾಡೆಮಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇಂದು ಬೃಹತ್ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ.
ಬೆಿಳಗ್ಗೆ 9 ರಿಂದ ಸಂಜೆ 4 ಗಂಟೆವರೆಗೆ ಉದ್ಯೋಗ ಮೇಳ ನಡೆಯಲಿದ್ದು, ಹತ್ತನೇ ತರಗತಿ ಪಾಸಾದ ವಿದ್ಯಾರ್ಥಿಗಳಿಂದ ಸ್ನಾತಕೋತ್ತರ ಪದವಿ ಪಡೆದ ಎಲ್ಲಾ ವಿದ್ಯಾರ್ಥಿಗಳೂ ಈ ಮೇಳದಲ್ಲಿ ಭಾಗವಹಿಸಬಹುದು. ಬೆಳಿಗ್ಗೆ 9.30ಕ್ಕೆ ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀಶೈಲ ಎಜುಕೇಶನಲ್ ಟ್ರಸ್ಟ್ ಖಜಾಂಚಿ ಜಿ.ಎಸ್. ಅನಿತ್ಕುಮಾರ್ ಮತ್ತು ದಾವಣಗೆರೆ ವಿಶ್ವವಿದ್ಯಾಲಯದ ಉಪಕುಲಪತಿ ಡಾ.ಬಿ.ಡಿ. ಕುಂಬಾರ್ ನೆರವೇರಿಸಲಿದ್ದಾರೆ.