ದಾವಣಗೆರೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ‘ಮಾದರಿ ವೃತ್ತಿ ಕೇಂದ್ರ’ದ ವತಿಯಿಂದ ಇಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ನೇರ ಸಂದರ್ಶನ ನಡೆಯಲಿದೆ.
ನೇರ ಸಂದರ್ಶನದಲ್ಲಿ ದೇಶಪಾಂಡೆ ಫೌಂಡೇಶನ್, ಅನ್ಮೋಲ್ ಪಬ್ಲಿಕ್ ಸ್ಕೂಲ್ ಹಾಗೂ ಇತರೆ ನಗರದ ಖಾಸಗಿ ಕಂಪನಿಗಳು ಭಾಗವಹಿಸುತ್ತಿದ್ದು, ಯಾವುದೇ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಹೊಂದಿದ 18-30 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಮೊ.ಸಂ: 6361550016, ಸಂಪರ್ಕಿಸಲು ಜಿಲ್ಲಾ ಉದ್ಯೋಗಾಧಿಕಾರಿ ಡಿ. ರವೀಂದ್ರ ತಿಳಿಸಿದ್ದಾರೆ.