ಶಿವಮೊಗ್ಗ, ಮೇ 30- ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕುಂಚೇನಹಳ್ಳಿ ಗ್ರಾಮದ ಡಿವೈಡರ್ಗೆ ಬೈಕ್ ಡಿಕ್ಕಿಯಾಗಿ ಬೈಕ್ ಸವಾರ ತೀವ್ರ ಗಾಯಗೊಂಡಿದ್ದಾನೆ.
ಬೈಕ್ ಸವಾರ ಸಲ್ಮಾನ್ (23) ನ್ಯಾಮತಿ ಪಟ್ಟಣದ ಶಿವಾನಂದಪ್ಪ ಬಡಾವಣೆ ನಿವಾಸಿಯಾಗಿದ್ದು, ಶಿವಮೊಗ್ಗ ನಗರದಲ್ಲಿ ಮೊಬೈಲ್ ಶಾಪ್ ಹೊಂದಿದ್ದು, ಪ್ರತಿನಿತ್ಯ ಶಿವಮೊಗ್ಗ ನ್ಯಾಮತಿ ಓಡಾಡಿಕೊಂಡಿದ್ದು ಇಂದು ಎಂದಿನಂತೆ ಶಿವಮೊಗ್ಗಕ್ಕೆ ತೆರೆಳುವಾಗ ಅಪಘಾತ ಸಂಭವಿಸಿದೆ.
ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಸವಾರನನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಈ ಸಂಬಂಧ ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.