ದಾವಣಗೆರೆ, ಜೂ.1- ತನ್ನ ಇಬ್ಬರು ಮಕ್ಕಳಿಗೆ ಟಿಕ್ಸೋ ಟೇಪ್ ಸುತ್ತಿ ಉಸಿರುಗಟ್ಟಿಸಿ ಕೊಲೆ ಮಾಡಿದ ಹಿನ್ನೆಲೆಯಲ್ಲಿ ಅಮರ್ (36) ಎಂಬಾತನ್ನು ಪೊಲೀಸರು ಬಂಧಿಸಿದ್ದಾರೆ.
ಗೋಕಾಕ್ ಮೂಲದ ಹಾಲಿ ದಾವಣಗೆರೆ ನಗರದ ಆಂಜನೇಯ ಬಡಾವಣೆ ವಾಸಿಯಾದ, ಹರಿಹರದ ಕಾರ್ಗಿಲ್ ಫ್ಯಾಕ್ಟರಿಯಲ್ಲಿ ಕೆಮಿಕಲ್ ಇಂಜಿನಿಯರಿಂಗ್ ಕೆಲಸ ಮಾಡುತ್ತಿರುವ ಆರೋಪಿತ ಅಮರ್, ಕಳೆದ ಬುಧವಾರ ರಾತ್ರಿ 10.30 ಗಂಟೆ ವೇಳೆಗೆ ತನ್ನ ಬುದ್ದಿ ಮಾಂದ್ಯ ಮಕ್ಕಳಾದ ಅದ್ವೈತ್ ಮತ್ತು ಅನ್ವೀತ್ ಅವಳಿ ಮಕ್ಕಳನ್ನು ಕೊಲೆ ಮಾಡಿದ್ದಾನೆ. ಬುದ್ದಿಮಾಂದ್ಯರಾದ ಮಕ್ಕಳಿಗೆ ಸರಿಯಾಗಿ ಮಾತನಾಡಲು ಬರುತ್ತಿರಲಿಲ್ಲ. ಎಲ್ಲದಕ್ಕೂ ಹಠ ಮಾಡುತ್ತಿದ್ದರು. ಇದರಿಂದ ತನ್ನ ಕಾರಿ ನಲ್ಲಿ ಮಕ್ಕಳನ್ನು ಕರೆದುಕೊಂಡು ಚಳಗೇರಿ ಟೋಲ್ ಹತ್ತಿರ ಕರೆದುಕೊಂಡು ಹೋಗಿ ಸರ್ವೀಸ್ ರಸ್ತೆಯಲ್ಲಿ ಮಕ್ಕಳಿಬ್ಬರಿಗೂ ಟೆಕ್ಸೋ ಟೇಪ್ ಸುತ್ತಿ ಉಸಿರುಗಟ್ಟಿಸಿ, ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ.
ಈ ಸಂಬಂಧ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಎಸ್ಪಿ ಅರುಣ್ ತಿಳಿಸಿದ್ದಾರೆ.