ಜಿಗಳಿ: ಉದ್ಯೋಗ ಖಾತ್ರಿ ಕಾರ್ಮಿಕರಿಗೆ ಆರೋಗ್ಯ ತಪಾಸಣೆ

ಜಿಗಳಿ: ಉದ್ಯೋಗ ಖಾತ್ರಿ ಕಾರ್ಮಿಕರಿಗೆ ಆರೋಗ್ಯ ತಪಾಸಣೆ

ಮಲೇಬೆನ್ನೂರು, ಜೂ. 1 – ಜಿಗಳಿ ಗ್ರಾ.ಪಂ. ಕಛೇರಿ ಆವರಣದಲ್ಲಿ ಬುಧವಾರ ಆರೋಗ್ಯ ಇಲಾಖೆ ಮತ್ತು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ಮತ್ತು ಕರ್ನಾಟಕ ಹೆಲ್ತ್ ಪ್ರಮೋಷನ್ ಟ್ರಸ್ಟ್ ವತಿಯಿಂದ ಆರೋಗ್ಯ ಅಮೃತ ಅಭಿಯಾನದಡಿ ಉದ್ಯೋಗ ಖಾತ್ರಿ ಕೂಲಿ ಕಾರ್ಮಿಕರಿಗೆ, ಸ್ವ-ಸಹಾಯ ಸಂಘಗಳ ಸದಸ್ಯರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು. ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ವಿನೋದ ಜಿ.ಆರ್. ಹಾಲೇಶ್‌ಕುಮಾರ್ ಮತ್ತು ಗ್ರಾ.ಪಂ. ಸದಸ್ಯರಾದ ಡಿ.ಎಂ. ಹರೀಶ್‌, ಬೇವಿನಹಳ್ಳಿ ಆನಂದ್‌ಗೌಡ ಅವರು ಶಿಬಿರವನ್ನು ಉದ್ಘಾಟಿಸಿದರು. 

ಆರೋಗ್ಯ ನಿರೀಕ್ಷಣಾಧಿಕಾರಿ ಎ.ಆರ್. ತಿಪ್ಪೇಸ್ವಾಮಿ ಪ್ರಾಸ್ತಾವಿಕವಾಗಿ ಮಾತನಾಡಿ ಶಿಬಿರದ ಮಹತ್ವ ಹಾಗೂ ವಿಶ್ವ ತಂಬಾಕು ವಿರೋಧಿ ದಿನಾಚರಣೆಯ ಉದ್ದೇಶವನ್ನು ತಿಳಿಸಿದರು. ತಾ.ಪಂ. ಐ.ಇ.ಸಿ. ಸಂಯೋಜಕ ಬಿ.ಎಂ. ಮಾರುತಿ ಕುಮಾರ್, ಕೆ.ಹೆಚ್.ಪಿ.ಟಿ. ತಾ. ಸಂಯೋಜಕಿ ಶ್ರೀಮತಿ ವನಿತಾ ಗ್ರಾ.ಪಂ. ಕಾರ್ಯದರ್ಶಿ ಶ್ರೀಮತಿ ಸುಜಾತ, ಇತರರು  ಭಾಗವಹಿಸಿದ್ದರು. 

error: Content is protected !!