ಬಾಪೂಜಿ ವಿದ್ಯಾಸಂಸ್ಥೆಯ ಶ್ರೀಮತಿ ಪಾರ್ವತಮ್ಮ ಶಾಮನೂರು ಶಿವಶಂಕರಪ್ಪ ವಿಜ್ಞಾನ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಇಂದು ಬೆಳಿಗ್ಗೆ 10.30 ಕ್ಕೆ ಸ್ವಾಗತ ಕಾರ್ಯಕ್ರಮವನ್ನು ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಕಾಲೇಜಿನ ಪ್ರಾಂಶುಪಾಲ ಪ್ರೊ. ಎಂ.ಪಿ. ರುದ್ರಪ್ಪ ಅಧ್ಯಕ್ಷತೆಯಲ್ಲಿ ಜರುಗುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಬಾಪೂಜಿ ದಂತ ವೈದ್ಯಕೀಯ ಮಹಾವಿದ್ಯಾಲಯದ ಉಪನ್ಯಾಸಕರಾದ ಡಾ. ಜ್ಞಾನಶ್ರೀ, ಇಂಗ್ಲಿಷ್ ಭಾಷಾ ಉಪನ್ಯಾಸಕರಾದ ಸುಗ್ಗಲಾದೇವಿ ಪಾಲ್ಗೊಳ್ಳಲಿದ್ದಾರೆ.
January 16, 2025