ಬಾಪೂಜಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಅಂತಿಮ ಶೈಕ್ಷಣಿಕ ವರ್ಷದ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಸಮಾರಂಭ ಕಾರ್ಯಕ್ರಮವನ್ನು ಇಂದು ಬೆಳಿಗ್ಗೆ 10.30 ಗಂಟೆಗೆ ಕಾಲೇಜಿನ ಆವರಣದಲ್ಲಿರುವ ಎಸ್.ಎಸ್. ಮಲ್ಲಿಕಾರ್ಜುನ್ ಸಾಂಸ್ಕೃತಿಕ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದೆ.
ಸಮಾರಂಭದ ಅಧ್ಯಕ್ಷತೆಯನ್ನು ಶಾಸಕ ಶಾಮನೂರು ಶಿವಶಂಕರಪ್ಪ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಡಿಸಿಪಿ ಜಿ.ಹೆಚ್.ಯತೀಶ್ಚಂದ್ರ, ದಾವಣಗೆರೆ ವಿಶ್ವವಿದ್ಯಾಲಯ ಕುಲಸಚಿವ ಡಾ. ಕೆ. ಶಿವಶಂಕರ್ ಪಾಲ್ಗೊಳ್ಳಲಿದ್ದಾರೆ. ಪ್ರೊ. ವೈ. ವೃಷಭೇಂದ್ರಪ್ಪ, ಪ್ರಾಂಶುಪಾಲ ಡಾ. ಹೆಚ್.ಬಿ.ಅರವಿಂದ ಅವರುಗಳು ಉಪಸ್ಥಿತರಿರುವರು.