ದಾವಣಗೆರೆ, ಜೂ. 11 – ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲೆಯ ಪರಿಶಿಷ್ಟ ಜಾತಿ ಕಾನೂನು ಪದವೀಧರರಿಗೆ ಶಿಷ್ಯವೇತನ ನೀಡಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜುಲೈ 15 ಕೊನೆ ದಿನ. ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಿದ ನಂತರ ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಂಬಂಧಿಸಿದ ತಾಲ್ಲೂಕುಗಳ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ www.sw.kar.nic.in ಅಥವಾ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರ ಕಚೇರಿಗೆ ಸಂಪರ್ಕಿಸಲು ಉಪನಿರ್ದೇಶಕ ನಾಗರಾಜ್ ತಿಳಿಸಿದ್ದಾರೆ.