ಹರಿಹರ, ಜೂ.10- ಹರಿಹರ ತಾಲ್ಲೂಕಿನ ಹನಗವಾಡಿ ಸಮೀಪದ ಶ್ರೀ ವೀರಶೈವ ಲಿಂಗಾಯತ ಪಂಚಾಮ ಸಾಲಿ ಪೀಠಕ್ಕೆ ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಹಾಗೂ ಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ ಅವರು ಭೇಟಿ ನೀಡಿ, ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿ ಅವರ ಆಶೀರ್ವಚನ ಪಡೆದರು. ಈ ಸಂದರ್ಭದಲ್ಲಿ ಪಂಚಮ ಸಾಲಿ ಸಮಾಜದ ಜಿಲ್ಲಾಧ್ಯಕ್ಷ ಬಿ.ಎಸ್.ಉಮಾಪತಿ ಅವರು ಉಪಸ್ಥಿತರಿದ್ದರು.
January 12, 2025