ಮಹಿಳೆಯರ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಗೆ ನಗರದ ಬಸ್ ನಿಲ್ದಾಣದಲ್ಲಿ ಚಾಲನೆ ನೀಡಲಾಗುವುದು.ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಚಾಲನೆ ನೀಡಲಿದ್ದಾರೆ. ಅಧ್ಯಕ್ಷತೆಯನ್ನು ಶಾಸಕ ಬಿ.ಪಿ. ಹರೀಶ್ ವಹಿಸಲಿದ್ದಾರೆ. ಮಖ್ಯ ಅತಿಥಿಗಳಾಗಿ ಸಂಸದ ಜಿ.ಎಂ. ಸಿದ್ದೇಶ್ವರ, ನಗರಸಭೆ ಅಧ್ಯಕ್ಷೆ ಶಾಹೀನಾಬಾನು ದಾದಾಪೀರ್ ಮತ್ತು ವಿಶೇಷ ಆಹ್ವಾನಿತರಾಗಿ ತಹಶೀಲ್ದಾರ್ ಪೃಥ್ವಿ ಸಾನಿಕಂ, ತಾಪಂ ಇಓ ರವಿ.ಎನ್. ಸಿಪಿಐ ಸತೀಶ್ ಕುಮಾರ್, ಪೌರಾಯುಕ್ತ ಐಗೂರು ಬಸವರಾಜ್ ಮತ್ತಿತರರು ಉಪಸ್ಥಿತರಿರಲಿದ್ದಾರೆ.
January 11, 2025