ಬಿಸಿಯೂಟ ತಯಾರಕರ ವೇತನ ಹೆಚ್ಚಿಸಲು ಇಂದು ಜಿಲ್ಲಾಧಿಕಾರಿ ಕಚೇರಿ ಬಳಿ ಹೋರಾಟ

ಶಾಲೆಗಳಲ್ಲಿ ಅಡುಗೆ ಕೆಲಸ ಮಾಡುತ್ತಿರುವ ಬಿಸಿಯೂಟ ತಯಾರಕರ ವೇತನವನ್ನು ಆರು ಸಾವಿರ ರೂಪಾಯಿಗಳಿಗೆ ಹೆಚ್ಚಿಸಲು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿ, ರಾಜ್ಯಾದ್ಯಂತ ಇಂದು ಹೋರಾಟ ಮಾಡಲು ರಾಜ್ಯ ಸಮಿತಿ ಕರೆ ನೀಡಿದೆ ಎಂದು ಬಿಸಿಯೂಟ ತಯಾರಕರ ಫೆಡರೇಷನ್ ಸಮಿತಿ ರಾಜ್ಯ ಪ್ರಧಾನ ಕಾರ್ಯದರ್ಶಿ ಕಾಂ. ಆವರಗೆರೆ ಚಂದ್ರು ತಿಳಿಸಿದ್ದಾರೆ.

ಇಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಬಳಿ ಸೇರಿ ದಾವಣಗೆರೆ ಜಿಲ್ಲೆಯ ಬಿಸಿಯೂಟ ತಯಾರಕರು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮತ್ತು ಶಿಕ್ಷಣ ಮಂತ್ರಿಗಳಿಗೆ ಮನವಿ ಸಲ್ಲಿಸಲಿದ್ದಾರೆ.

ದಾವಣಗೆರೆ ಜಿಲ್ಲೆಯ ತಾಲ್ಲೂಕುಗಳ ಬಿಸಿಯೂಟ ತಯಾರಕರು ಅಂದು ಬೆಳಿಗ್ಗೆ 11 ಗಂಟೆಗೆ ದಾವಣಗೆರೆ ಜಿಲ್ಲಾಧಿಕಾರಿಗಳ ಕಚೇರಿ ಬಳಿ ಆಗಮಿಸಬೇಕೆಂದು ಸಂಘಟನೆ ಕರೆ ನೀಡಿದೆ.

error: Content is protected !!