ನಗರದಲ್ಲಿ ಇಂದು ಜನ ಜಾಗೃತಿ ಜಾಥಾ

ದಾವಣಗೆರೆ  ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ಪ್ರತಿಬಂಧಕ ಮತ್ತು ನಿಯಂತ್ರಣ ಘಟಕ, ರಕ್ತಭಂಡಾರ, ಚಿಗಟೇರಿ ಜಿಲ್ಲಾ ಆಸ್ಪತ್ರೆ ಮತ್ತು ಜಿಲ್ಲೆಯ ವಿವಿಧ ರಕ್ತದಾನ ಕೇಂದ್ರಗಳು, ಜಿಲ್ಲಾ ಆರ್.ಆರ್.ಸಿ. ಕಾಲೇಜುಗಳು ಹಾಗೂ ವಿವಿಧ ಸ್ವಯಂ ಸೇವಾ ಸಂಘ ಸಂಸ್ಥೆ ಇವರ  ಸಂಯುಕ್ತಾಶ್ರಯದಲ್ಲಿ ಸಿ.ಜಿ ಆಸ್ಪತ್ರೆ ಆವರಣದಲ್ಲಿ ಇಂದು ಬೆಳಗ್ಗೆ 10.30 ಕ್ಕೆ ವಿಶ್ವ ರಕ್ತದಾನಿಗಳ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ವಿಶ್ವ ರಕ್ತದಾನಿಗಳ ದಿನಾಚರಣೆ ಅಂಗವಾಗಿ ಬೆಳಗ್ಗೆ  9 ಗಂಟೆಗೆ  ಆರಂಭವಾಗುವ ಜನ ಜಾಗೃತಿ ಜಾಥಾಕ್ಕೆ ಚಾಲನೆ ನೀಡುವರು. 10.30 ಕ್ಕೆ ಜಿ.ಪಂ. ಸಿಇಒ ಸುರೇಶ ಬಿ.ಇಟ್ನಾಳ್ ಕಾರ್ಯಕ್ರಮ ಉದ್ಘಾಟಿಸುವರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗರಾಜ ಅಧ್ಯಕ್ಷತೆ ವಹಿಸುವರು.

ಮುಖ್ಯ ಅತಿಥಿಗಳಾಗಿ ಚಿಗಟೇರಿ ಜಿಲ್ಲಾ ಆಸ್ಪತ್ರೆಯ ಅಧೀಕ್ಷಕ  ಡಾ. ಸುಭಾಷ್ ಚಂದ್ರ ಎಸ್, ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯ ಅಧೀಕ್ಷಕ ಡಾ. ಮಧು ಎಸ್.ಪಿ, ಚಿಗಟೇರಿ ಜಿಲ್ಲಾ ಆಸ್ಪತ್ರೆ ನಿವಾಸಿ ವೈದ್ಯಾಧಿಕಾರಿ ಡಾ. ಮಂಜು ನಾಥ ಪಾಟೀಲ್, ಜಿಲ್ಲಾ ಏಡ್ಸ್ ಪ್ರತಿಬಂಧಕ ಮತ್ತು ನಿಯಂತ್ರಣ ಘಟಕದ ಕಾರ್ಯಕ್ರಮಾಧಿಕಾರಿ ಡಾ. ಕೆ ಹೆಚ್. ಗಂಗಾಧರ, ಸಿ.ಜೆ.ಆಸ್ಪತ್ರೆ ಎ.ಆರ್.ಟಿ. ಪ್ಲಸ್ ನೋಡಲ್ ಅಧಿಕಾರಿ ಡಾ. ಕೆ.ಶಿವರಾಜ್, ಚಿಗಟೇರಿ ಜಿಲ್ಲಾ ಆಸ್ಪತ್ರೆ ರಕ್ತ ಭಂಡಾರದ ವೈದ್ಯಾಧಿಕಾರಿ ಡಾ. ಡಿ.ಹೆಚ್. ಗೀತಾ ಮತ್ತಿತರರು ಭಾಗವಹಿಸುವರು.

error: Content is protected !!