ದಾವಣಗೆರೆ ವಿಶ್ವವಿದ್ಯಾ ನಿಲಯದ ಪರಿಸರ ಅಧ್ಯಯನ ವಿಭಾಗ ಮತ್ತು ರಾಷ್ಟ್ರೀಯ ಸೇವಾ ಯೋಜನೆಯ ಸಹಭಾಗಿತ್ವದಲ್ಲಿ ಇಂದು ಬೆಳಿಗ್ಗೆ 11 ಗಂಟೆಗೆ ವಿಶ್ವ ಪರಿಸರ ದಿನಾಚರಣೆ ನಡೆಯಲಿದೆ.
ವಿಶ್ವವಿದ್ಯಾನಿಲಯದ ಎಂಬಿಎ ಸಭಾಂಗಣದಲ್ಲಿ ನಡೆಯುವ ಕಾರ್ಯ ಕ್ರಮದಲ್ಲಿ ಪದ್ಮಶ್ರೀ ಪುರಸ್ಕೃತ ಪರಿಸರ ಪ್ರೇಮಿ ಸಾಲುಮರದ ತಿಮ್ಮಕ್ಕ ಮುಖ್ಯ ಅತಿಥಿಯಾಗಿ ಭಾಗವಹಿಸುವರು. ಕುಲ ಪತಿ ಪ್ರೊ.ಬಿ.ಡಿ.ಕುಂಬಾರ ಅಧ್ಯಕ್ಷತೆ ವಹಿಸಲಿದ್ದು, ಕುಲಸಚಿವರಾದ ಸರೋ ಜ ಬಿ.ಬಿ., ಪರೀಕ್ಷಾಂಗ ಕುಲಸಚಿವ ಡಾ.ಕೆ.ಶಿವಶಂಕರ, ಹಣಕಾಸು ಅಧಿಕಾರಿ ಡಿ.ಪ್ರಿಯಾಂಕ, ಪರಿಸರ ಅಧ್ಯಯನ ವಿಭಾಗದ ಸಂಯೋಜನಾಧಿಕಾರಿ ಪ್ರೊ.ಎಂ. ಗೋವಿಂದಪ್ಪ, ಎನ್ಎಸ್ಎಸ್ ಸಂಯೋಜನಾಧಿಕಾರಿ ಡಾ. ಅಶೋಕಕುಮಾರ ಪಾಳೇದ ಉಪಸ್ಥಿತರಿರುವರು.