ದಾವಣಗೆರೆ, ಜೂ.22- ಜಿಲ್ಲಾ ಕಾಂಗ್ರೆಸ್ ಸಮಿತಿಯ ಎಲ್ಲಾ ಘಟಕಗಳ ಜಿಲ್ಲಾಧ್ಯಕ್ಷರ ಸಮ್ಮುಖದಲ್ಲಿ ಇದೇ ದಿನಾಂಕ 24 ಶನಿವಾರ ಬೆಳಿಗ್ಗೆ 11.30ಕ್ಕೆ ಸಭೆಯನ್ನು ನಗರದ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಕರೆಯಲಾಗಿದೆ. ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವ ರುಗಳಿಗೆ ಸನ್ಮಾನ ಸಮಾರಂಭ ವನ್ನು ಏರ್ಪಡಿಸುವುದರ ಕುರಿತು ಈ ಸಭೆ ಕರೆಯಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಎಸ್ಸಿ ಘಟಕದ ಅಧ್ಯಕ್ಷ ಬಿ.ಹೆಚ್.ವೀರಭದ್ರಪ್ಪ ಕೋರಿದ್ದಾರೆ.
January 11, 2025