ಹರಿಹರ ನಗರಸಭೆಯಿಂದ ಕೇಂದ್ರ ಪುರಸ್ಕೃತ ಪ್ರಧಾನ ಮಂತ್ರಿ ಬೀದಿ ಬದಿ ವ್ಯಾಪಾರಿಗಳ ಆತ್ಮ ನಿರ್ಭರ ನಿಧಿ ಯೋಜನೆಯಡಿ (ಪಿಎಂ ಸ್ವನಿಧಿ) ಬೀದಿ ಬದಿ ವ್ಯಾಪಾರಿಗಳಿಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು ಇಂದು ಬೆಳಗ್ಗೆ 11 ಗಂಟೆಗೆ ಗುರುಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ಸಂಸದ ಜಿ.ಎಂ.ಸಿದ್ದೇಶ್ವರ, ಶಾಸಕ ಬಿ.ಪಿ. ಹರೀಶ್ ಹಾಗೂ ನಗರಸಭಾ ಸದಸ್ಯರು ಪಾಲ್ಗೊಳ್ಳಲಿದ್ದಾರೆ ಎಂದು ಪೌರಾಯುಕ್ತ ಐಗೂರು ಬಸವರಾಜ್ ತಿಳಿಸಿದ್ದಾರೆ.
November 28, 2024