ಪ್ಲಾಸ್ಟಿಕ್ ವಸ್ತುಗಳ ಸಂಗ್ರಹಣೆ, ಸಾಗಾಣಿಕೆ ಮತ್ತು ಮಾರಾಟಕ್ಕೆ ನಿಷೇಧ

ದಾವಣಗೆರೆ, ಜೂ.26- ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ ಅಂಗಡಿ/ಮಳಿಗೆಗಳ ಮಾಲೀಕರು ಅಥವಾ ಮಾರಾಟಗಾರರು ಯಾವುದೇ ರೀತಿಯ ಪ್ಲಾಸ್ಟಿಕ್ ವಸ್ತುಗಳ ಸಂಗ್ರಹಣೆ, ಸಾಗಾಣಿಕೆ ಮತ್ತು ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ಮಹಾನಗರ ಪಾಲಿಕೆ ಆಯುಕ್ತರಾದ ಶ್ರೀಮತಿ ರೇಣುಕಾ ತಿಳಿಸಿದ್ದಾರೆ.

ಮಹಾನಗರ ಪಾಲಿಕೆ ವ್ಯಾಪ್ತಿಯ ಯಾವುದೇ ವ್ಯಕ್ತಿ, ಅಂಗಡಿ ಮಾಲೀಕ, ಮಾರಾಟಗಾರ, ಸಗಟು ಮಾರಾಟಗಾರ, ವ್ಯಾಪಾರಿ ಅಥವಾ ಚಿಲ್ಲರೆ ವ್ಯಾಪಾರಿಗಳು, ಪ್ಲಾಸ್ಟಿಕ್‍ನಿಂದ ತಯಾರಿಸಿದ  ಯಾವುದೇ ರೀತಿಯ ಕ್ಯಾರಿಬ್ಯಾಗ್, ಭಿತ್ತಿಪತ್ರ, ತೋರಣ, ಫ್ಲೆಕ್ಸ್, ಬಾವುಟ, ತಟ್ಟೆ, ಲೋಟ ಹಾಗೂ ಊಟದ ಮೇಜಿನ ಮೇಲೆ ಹರಡುವ ಪ್ಲಾಸ್ಟಿಕ್ ಹಾಳೆ ಮತ್ತು ಕ್ಲಿಂಗ್ ಫಿಲ್ಮ್ಸ್, ಥರ್ಮೊಕೋಲ್ ಹಾಗೂ ಪ್ಲಾಸ್ಟಿಕ್ ಬೀಡ್ಸ್‍ನಿಂದ ತಯಾರಿಸಿದಂತಹ ವಸ್ತುಗಳ ತಯಾರಿಕೆ, ಸರಬರಾಜು, ಸಂಗ್ರಹಣೆ, ಸಾಗಾಣಿಕೆ ಮಾರಾಟ ಮತ್ತು ವಿತರಣೆ ಮಾಡುವುದನ್ನು ನಿಷೇಧಿಸಿದೆ ಹಾಗೂ ಸರ್ಕಾರದ ನಿರ್ದೇಶನದಂತೆ ವಿನಾಯಿತಿ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

error: Content is protected !!