ನಾಳೆ ವೀರಶೈವ ಲಿಂಗಾಯತ ನೂತನ ಸಚಿವರು-ಶಾಸಕರಿಗೆ ಅಭಿನಂದನೆ

ದಾವಣಗೆರೆ, ಜು. 3- ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ವತಿಯಿಂದ ನಾಡಿದ್ದು ದಿನಾಂಕ 5ರ ಬುಧವಾರ ಸಂಜೆ 5.30ಕ್ಕೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ವೀರಶೈವ ಲಿಂಗಾಯತ ನೂತನ ಸಚಿವರು, ಶಾಸಕರ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ವೇದಿಕೆಯ ಮಧ್ಯ ಕರ್ನಾಟಕ ವಿಭಾಗದ ಉಪಾಧ್ಯಕ್ಷ ಲೋಕೇಶಯ್ಯ ಎಂ. ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಂಭಾಪುರಿ ಪೀಠದ ಶ್ರೀ ಪ್ರಸನ್ನ ರೇಣುಕ ಡಾ.ವೀರಸೋಮೇಶ್ವರ ರಾಜದೇಶಿಕೇಂದ್ರ
ಶಿವಾಚಾರ್ಯ ಸ್ವಾಮೀಜಿ ದಿವ್ಯ ಸಾನ್ನಿಧ್ಯದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಗೌಡಗಾಂವ ಹಿರೇಮಠದ ಶ್ರೀ ಡಾ.ಜಯಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಹೇಳಿದರು.

ಸರ್ವೋಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಶಿವರಾಜ್ ಪಾಟೀಲ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕೇಂದ್ರ ಸರ್ಕಾರದ ರಾಸಾಯನಿಕ ಹಾಗೂ ರಸಗೊಬ್ಬರ, ಇಂಧನ ಖಾತೆ ರಾಜ್ಯ ಸಚಿವ ಭಗವಂತ ಖೂಬಾ, ತೆಲಂಗಾಣದ ಲೋಕಸಭಾ ಸದಸ್ಯ ಬಿ.ಬಿ. ಪಾಟೀಲ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ ಎಂದು ತಿಳಿಸಿದರು.

ಹಿರಿಯ ಶಾಸಕ .ಶಾಮನೂರು ಶಿವಶಂಕರಪ್ಪ, ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಸೇರಿದಂತೆ 16ನೇ ವಿಧಾನಸಭೆಗೆ ಆಯ್ಕೆಯಾದ ಎಲ್ಲಾ ಶಾಸಕರುಗಳು ಪಾಲ್ಗೊಳ್ಳಲಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಹೆಚ್.ಸಿ. ಭಾಗ್ಯ, ಓಂಕಾರಮೂರ್ತಿ ಕೆ.ಎಂ., ಗಂಗಾಧರ ಎನ್.ಎಸ್.ಎಂ., ಕೆ.ವಿ. ಕಿರಣ್, ಶಶಿಕುಮಾರ್ ಇತರರು ಉಪಸ್ಥಿತರಿದ್ದರು.

error: Content is protected !!