ದಾವಣಗೆರೆ, ಜು.6- ಜಿಲ್ಲೆಯ ನ್ಯಾಮತಿ, ಜಗಳೂರು, ದಾವಣಗೆರೆ, ಚನ್ನಗಿರಿ ಮತ್ತು ಹರಿಹರ ತಾಲ್ಲೂಕುಗಳಲ್ಲಿ ತೆರವಾಗಿರುವ ಗ್ರಾಮ ಪಂಚಾಯಿತಿ ಸದಸ್ಯರ ಸ್ಥಾನಗಳಿಗೆ ಇದೇ ದಿನಾಂಕ 23ರಂದು ಉಪ ಚುನಾವಣೆ ನಡೆಸಲಾಗುವುದು ಎಂದು ಜಿಲ್ಲಾ ಧಿಕಾರಿ ಶಿವಾನಂದ ಕಾಪಶಿ ತಿಳಿಸಿದ್ದಾರೆ.
ಇದೇ ದಿನಾಂಕ 12 ರಂದು ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನ. ದಿನಾಂಕ 13 ನಾಮಪತ್ರಗಳನ್ನು ಪರಿಶೀ ಲಿಸುವ ದಿನ. ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ದಿನಾಂಕ 15 ಕಡೆ ದಿನವಾಗಿದೆ.
ನ್ಯಾಮತಿ ತಾಲ್ಲೂಕಿನ ಗುಡ್ಡೇಹಳ್ಳಿ ಗ್ರಾ.ಪಂ ವ್ಯಾಪ್ತಿಯ ಜೀನಹಳ್ಳಿ, ಜಗಳೂರು ತಾಲ್ಲೂಕಿನ ಅಣಬೂರು ಗ್ರಾ.ಪಂ ವ್ಯಾಪ್ತಿಯ ದೊಡ್ಡಬೊಮ್ಮನಹಳ್ಳಿ, ದಾವಣಗೆರೆ ತಾಲ್ಲೂಕು ಹುಚ್ಚವ್ವನಹಳ್ಳಿ ಗ್ರಾ.ಪಂ ವ್ಯಾಪ್ತಿಯ ಹೆಚ್.ಬಸಾಪುರ, ಚನ್ನಗಿರಿ ತಾಲ್ಲೂಕು ಮುದಿಗೆರೆ ಗ್ರಾ.ಪಂ ವ್ಯಾಪ್ತಿಯ ಬಿಲ್ಲಹಳ್ಳಿ ಹರಿಹರ ತಾಲ್ಲೂಕಿನ ಸಾರಥಿ ಗ್ರಾ.ಪಂ ವ್ಯಾಪ್ತಿಯ ದೀಟೂರು, ಕೊಂಡಜ್ಜಿ ಗ್ರಾ.ಪಂ ವ್ಯಾಪ್ತಿಯ ಗಂಗನರಸಿ ಮತ್ತು ಎಳೆಹೊಳೆ ಗ್ರಾ.ಪಂ ವ್ಯಾಪ್ತಿಯ ಮಳಲಹಳ್ಳಿ ಕ್ಷೇತ್ರಗಳಲ್ಲಿ ತೆರವಾಗಿರುವ ಸ್ಥಾನಗಳಿಗೆ ಚುನಾವಣೆ ನಡೆಯಲಿವೆ.