ದಾವಣಗೆರೆ, ಜು. 6- ನಗರದ ಇಎಸ್‌ಐ ಆಸ್ಪತ್ರೆಯಲ್ಲಿ ಗುತ್ತಿಗೆ ಆಧಾರದಲ್ಲಿ ಹಲವಾರು ವರ್ಷಗಳಿಂದ ಡಿ ಗ್ರೂಪ್ ನೌಕರರು ಕೆಲಸ ಮಾಡುತ್ತಿದ್ದು, ಕೊರೊನಾ ಸಂದರ್ಭದಲ್ಲೂ ಸಹ ಉತ್ತಮ ಕೆಲಸ ನಿರ್ವಹಿಸಿದ್ದು, ಅವರನ್ನು ಖಾಯಮಾತಿ ಮಾಡಬೇಕೆಂದು ಐಎನ್‌ಟಿಯುಸಿ ಕಾರ್ಯದರ್ಶಿ ಆರ್.ಎಸ್. ತಿಪ್ಪೇಸ್ವಾಮಿ ನೇತೃತ್ವದ ನಿಯೋಗ ಧಾರವಾಡದಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರಿಗೆ ಮನವಿ ಸಲ್ಲಿಸಿದೆ.
ಮನವಿ ಸ್ವೀಕರಿಸಿದ ಸಚಿವರು ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಖಾಸಗಿ ಆಸ್ಪತ್ರೆಗಳಲ್ಲಿ ಈ ಮೊದಲು ಇಎಸ್‌ಐ ವಿಮೆ ಹೊಂದಿರುವ ಹೃದಯ ಸಂಬಂಧಿ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದರು. ಆದರೆ ನಾಲ್ಕು ವರ್ಷಗಳಿಂದ ಖಾಸಗಿ ಆಸ್ಪತ್ರೆಗಳಲ್ಲಿ ಹೃದಯ ಸಂಬಂಧಿ ಕಾಯಿಲೆ ಇರುವ ಇಎಸ್‌ಐ ವಿಮಾ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿಲ್ಲ. ಆದ್ದರಿಂದ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವಂತೆ ಮನವಿ ಮಾಡಲಾಯಿತು.
ಈ ಸಂದರ್ಭದಲ್ಲಿ ಆರ್.ಎಸ್. ತಿಪ್ಪೇಸ್ವಾಮಿ, ಶಿವಮೂರ್ತಿ, ಟಿ.ಜಿ. ರಾಜೇಂದ್ರ ಬಂಗೇರ, ಪ್ರಭು ಮತ್ತಿತರರು ಉಪಸ್ಥಿತರಿದ್ದರು.