ದಾವಣಗೆರೆ, ಜು. 6 – ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ 7ನೇ ವೇತನದ ಆಯೋಗದ ಗ್ಯಾರಂಟಿ ಮರೆಯಬಾರದು ಎಂದು ವೈ.ಎ.ನಾರಾಯಣ ಸ್ವಾಮಿ ಸರ್ಕಾರಕ್ಕೆ ತಾಕೀತು ಮಾಡಿದ್ದಾರೆ.
ಗುರುವಾರ ವಿಧಾನಸಭಾ ಅಧಿವೇಶನದಲ್ಲಿ ವಿಧಾನ ಪರಿಷತ್ ನಲ್ಲಿ ನಾರಾಯಣ ಸ್ವಾಮಿ ಚುಕ್ಕೆ ಗುರುತಿನ ಪ್ರಶ್ನೆ ಕೇಳಿ ಏಳನೇ ವೇತನ ಆಯೋಗ ಜಾರಿ ಮಾಡಬೇಕೆಂದು ಆಗ್ರಹಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರ ನೀಡಿ, 7ನೇ ವೇತನ ಆಯೋಗದ ವರದಿ ತರಿಸಿಕೊಂಡು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. 7ನೇ ವೇತನ ಆಯೋಗ ಕೂಡಲೇ ಜಾರಿ ಮಾಡಿ ನೌಕರ ವರ್ಗಗಳ ನೆರವಿಗೆ ರಾಜ್ಯ ಸರ್ಕಾರ ಸ್ಪಂದಿಸಬೇಕಾಗಿದೆ. ಗ್ಯಾರಂಟಿ ಯೋಜನೆಯಲ್ಲಿ ಇದನ್ನು ಮರೆಯಬಾರದೆಂದು ಆಗ್ರಹಿಸಿದರು. ಸಿಎಂ ಸಿದ್ದರಾಮಯ್ಯ ರಾಜ್ಯದ ಆರ್ಥಿಕ ಸ್ಥಿತಿ ಅಡಿ ಕ್ರಮ ವಹಿಸಲಾಗುವುದು ಎಂದು ಭರವಸೆ ನೀಡಿದರು.