ಆರ್.ಎಲ್. ಕಾನೂನು ಕಾಲೇಜು ಜಿಲ್ಲಾ ವಕೀಲರ ಸಂಘ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಇವರ ಸಹಯೋಗದೊಂದಿಗೆ ನಾಳೆ ಶನಿವಾರ ನಡೆಯುವ ಲೋಕ್ ಅದಾಲತ್ ಪ್ರಯುಕ್ತ ಜಾಗೃತಿ ಜಾಥಾವನ್ನು ಇಂದು ಬೆಳಿಗ್ಗೆ 10.30ಕ್ಕೆ ಆರ್.ಎಲ್. ಕಾನೂನು ಕಾಲೇಜಿನ ಆವರಣದಲ್ಲಿ ಆಯೋಜಿಸಲಾಗಿದೆ. ಜಿಲ್ಲಾ ನ್ಯಾಯಾಧೀಶರಾದ ರಾಜೇಶ್ವರಿ ಎನ್. ಹೆಗಡೆ ಜಾಥಾ ಉದ್ಘಾಟಿ ಸುವರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಕಾನೂನು ಸೇವಾ ಪ್ರಾಧಿ ಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ್ ಮ. ಕರಣ್ಣನವರ್, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಲ್.ಹೆಚ್. ಅರುಣ್‍ಕುಮಾರ್, ಕಾರ್ಯದರ್ಶಿ ಎಸ್. ಬಸವರಾಜ್, ಉಪಾಧ್ಯಕ್ಷ ಜಿ.ಕೆ. ಬಸವ ರಾಜ್ ಗೋಪನಾಳ್, ಸಹ ಕಾರ್ಯದರ್ಶಿ ಎ.ಎಸ್. ಮಂ ಜುನಾಥ್ ಆಗಮಿಸುವರು. ಆರ್.ಎಲ್. ಕಾನೂನು ಕಾಲೇಜಿನ ಪ್ರಾಂಶುಪಾಲರಾದ ಡಾ. ಜಿ.ಎಸ್. ಯತೀಶ್ ಉಪಸ್ಥಿತರಿರುವರು.
January 10, 2025