ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್ ಮಲ್ಲಿಕಾರ್ಜುನ್ ಅವರು ಇಂದು ಸಂಜೆ 7.30ಕ್ಕೆ ನಗರಕ್ಕೆ ಆಗಮಿಸಿ, ವಾಸ್ತವ್ಯ ಹೂಡುವರು.
ನಾಳೆ ಶನಿವಾರ ಬೆಳಿಗ್ಗೆ 11.45ಕ್ಕೆ ಜಿಲ್ಲಾ ಪಂಚಾಯತ್ ಆವರಣದಲ್ಲಿ ಹಮ್ಮಿಕೊಂಡಿರುವ ವನಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಚಿವರು, ನಂತರ ಮಧ್ಯಾಹ್ನ 12 ಗಂಟೆಗೆ ಜಿಲ್ಲಾ ಪಂಚಾಯತ್ ಎಸ್.ಎಸ್.ಮಲ್ಲಿಕಾರ್ಜುನ ಸಭಾಂಗಣದಲ್ಲಿ ಕೆಡಿಪಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸುವರು. ದಿನಾಂಕ 9ರ ಭಾನುವಾರ ತಮ್ಮ ಗೃಹ ಕಚೇರಿಯಲ್ಲಿ ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸುವರು.