ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲ್ಲೂಕು ಆರೋಗ್ಯ ಅಧಿಕಾರಿಗಳ ಕಚೇರಿ, ಸಾರ್ವಜನಿಕ ಶಿಕ್ಷಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಇಂದು ಬೆಳಿಗ್ಗೆ 10 ಕ್ಕೆ ಕುವೆಂಪು ಕನ್ನಡ ಭವನದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ-2023ರ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಉದ್ಘಾಟಿಸು ವರು. ಶಾಸಕ ಶಾಮನೂರು ಶಿವಶಂಕರಪ್ಪ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಸಂಸದ ಜಿ.ಎಂ ಸಿದ್ದೇಶ್ವರ, ಶಾಸಕ ಕೆ.ಎಸ್ ಬಸವಂತಪ್ಪ, ಪಾಲಿಕೆ ಮಹಾಪೌರ ವಿನಾಯಕ ಪೈಲ್ವಾನ್, ಜಿ.ಪಂ ಮುಖ್ಯಕಾರ್ಯನಿರ್ವಹಣಾಧಿಕಾರಿ ಸುರೇಶ್ ಬಿ. ಇಟ್ನಾಳ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗರಾಜ್, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ರೇಣುಕಾರಾಧ್ಯ ಭಾಗವಹಿಸುವರು.
ಆಜಾದಿ ಕಾ ಅಮೃತ್ ಮಹೋತ್ಸವದ ಅಂಗವಾಗಿ ಕುಟುಂಬ ಯೋಜನೆಯನ್ನು ಅಳವಡಿಸಿಕೊಂಡು, ಸಂತೋಷ ಮತ್ತು ಸಮೃದ್ದಿಯ ಜೀವನವನ್ನು ಆಯ್ಕೆ ಮಾಡಿಕೊಳ್ಳುತ್ತೇವೆಂದು ಪ್ರತಿಜ್ಞೆ ಮಾಡೋಣ ಎಂಬ ಘೋಷ ವಾಕ್ಯದೊಂದಿಗೆ ಜಾಥಾ ಕಾರ್ಯಕ್ರಮ ಇರುತ್ತದೆ. ಜಾಥಾಗೆ ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಚಾಲನೆ ನೀಡುವರು. ಜಾಥಾ ಬೆಳಿಗ್ಗೆ 9 ಗಂಟೆಗೆ ನಗರದ ತರಳಬಾಳು ಬಿ.ಇಡಿ ಕಾಲೇಜುನಿಂದ ಹೊರಡಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರೇಣುಕಾರಾಧ್ಯ ತಿಳಿಸಿದ್ದಾರೆ.