ಅಗ್ನಿವೀರ್ ಆಯ್ಕೆಗೆ ದೈಹಿಕ ಪರೀಕ್ಷೆ

ದಾವಣಗೆರೆ, ಜು.12- ಭಾರತೀಯ ಸೇನೆಯಲ್ಲಿನ ಅಗ್ನಿವೀರ್ ನೇಮಕಾತಿ ರಾಲಿ ಯು ಉಡುಪಿಯಲ್ಲಿನ ಮಹಾತ್ಮ ಗಾಂಧಿ ಸ್ಟೇಡಿಯಂನಲ್ಲಿ ಜುಲೈ 17 ರಿಂದ 25 ರ ವರೆಗೆ ನಡೆಯಲಿದೆ. ಅಗ್ನಿವೀರ್ ನೇಮಕಾತಿಗೆ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಿ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾದ ವರಿಗೆ ದೈಹಿಕ ಮತ್ತು ವೈದ್ಯಕೀಯ ಪರೀಕ್ಷೆಯನ್ನು ನಡೆಸಲಾಗುತ್ತದೆ. 

ದಾವಣಗೆರೆ ಜಿಲ್ಲೆಯಿಂದ 91 ಜನರು ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ರುವರು. ಇವರು ದೈಹಿಕ ಹಾಗೂ ವೈದ್ಯಕೀಯ ಪರೀಕ್ಷೆಗಾಗಿ ಅಗತ್ಯ ದಾಖಲೆಗಳೊಂದಿಗೆ ಹಾಜರಾಗಬೇಕು ಮತ್ತು ಮಾಹಿತಿಗೆ 0824-2951276 ದೂರವಾಣಿಗೆ ಸಂಪರ್ಕಿಸಬಹುದು.

error: Content is protected !!