ನಗರದಲ್ಲಿ ಇಂದು ಪೋಕ್ಸೋ ಕಾನೂನಿನ ಅರಿವು ಕಾರ್ಯಾಗಾರ

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ದಕ್ಷಿಣ ವಲಯ ಮತ್ತು ರಾಜನಹಳ್ಳಿ ಸೀತಮ್ಮ ಬಾಲಕಿಯರ ಸ.ಪ.ಪೂ ಕಾಲೇಜು ಇವರ ಸಂಯುಕ್ತಾಶ್ರಯದಲ್ಲಿ ಇಂದು ಬೆಳಿಗ್ಗೆ 9:30ಕ್ಕೆ ಪೋಕ್ಸೋ ಕಾನೂನಿನ ಅರಿವು ಹಾಗೂ ಮಕ್ಕಳ ಹಕ್ಕುಗಳ ಬಗ್ಗೆ ಜಿಲ್ಲಾ ಮಟ್ಟದ ಕಾರ್ಯಾಗಾರವನ್ನು  ರಾಜನಹಳ್ಳಿ ಸೀತಮ್ಮ ಬಾಲಕಿಯರ ಸ.ಪ.ಪೂ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದೆ.

ಜಿಲ್ಲಾ ತ್ವರಿತಗತಿ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀಪಾದ ಕಾರ್ಯಕ್ರಮ ಉದ್ಘಾಟಿಸಲಿದ್ದು, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜಿ.ಆರ್ ತಿಪ್ಪೇಶಪ್ಪ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಹಿರಿಯ ಸಿವಿಲ್ ನ್ಯಾಯಾಧೀಶರಾದ ಮಹಾವೀರ ಮ. ಕರೆಣ್ಣವರ್, ದಕ್ಷಿಣ ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎಂ. ದಾರುಕೇಶ್, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಲ್.ಹೆಚ್. ಅರುಣ ಕುಮಾರ್, ಉಪಾಧ್ಯಕ್ಷ ಜಿ.ಕೆ ಬಸವರಾಜು ಗೋಪನಾಳ, ಸಹ ಕಾರ್ಯದರ್ಶಿ ಎ.ಎಸ್ ಮಂಜುನಾಥ, ಕಾಲೇಜಿನ ಉಪ ಪ್ರಾಚಾರ್ಯ ಎ.ಆರ್. ಮಂಜಪ್ಪ, ಎಸ್.ಡಿ.ಎಂ.ಸಿ ಅಧ್ಯಕ್ಷ ಎಸ್.ಕೆ. ಕುಬೇರಪ್ಪ ಪಾಲ್ಗೊಳ್ಳಲಿದ್ದು,  ಸಂಪನ್ಮೂಲ ವ್ಯಕ್ತಿಯಾಗಿ ಕಾನೂನು ನೆರವು ಅಭಿರಕ್ಷಕ ಎಸ್.ಹೆಚ್.ಎಸ್. ಶೌಕತ್ ಅಲಿ ಭಾಗವಹಿಸಲಿದ್ದಾರೆ.

error: Content is protected !!