ಶ್ರೀ ರಂಭಾಪುರಿ ಪೀಠ (ಬಾಳೆಹೊನ್ನೂರು), ಜು. 24- ಹೊನ್ನಾಳಿ ತಾಲ್ಲೂಕು ಹೊಟ್ಯಾಪುರ ಹಿರೇಮಠದ ಶ್ರೀ ಗಿರಿಸಿದ್ಧೇಶ್ವರ ಶಿವಾಚಾರ್ಯ ಸ್ವಾಮಿಗಳ ಅಗಲಿಕೆಗೆ ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಸಂತಾಪ ವ್ಯಕ್ತಪಡಿಸಿದ್ದಾರೆ.
ಶ್ರೀ ಗಿರಿಸಿದ್ಧೇಶ್ವರ ಶಿವಾಚಾರ್ಯರು ವೀರಶೈವ ಧರ್ಮ, ಸಂಸ್ಕೃತಿ ಪ್ರಸಾರ ಮಾಡುತ್ತಾ ಆ ಭಾಗದ ಭಕ್ತ ಸಂಕುಲಕ್ಕೆ ಸನ್ಮಾರ್ಗ ದರ್ಶನ ಮಾಡುತ್ತಿದ್ದರು. ಶ್ರೀ ರಂಭಾಪುರಿ ಜಗದ್ಗುರುಗಳವರ ಹಲವಾರು ಸಮಾರಂಭಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ, ಆಶೀರ್ವಾದ ಪಡೆದಿದ್ದನ್ನು ಮರೆಯುವಂತಿಲ್ಲ. ಸ್ನೇಹಜೀವಿಗಳಾಗಿದ್ದ ಅವರು ಭಕ್ತರ ಪ್ರೀತಿಗೆ ಪಾತ್ರರಾಗಿದ್ದರು. ಅವರ ಅಗಲಿಕೆ ನೋವನ್ನುಂಟು ಮಾಡಿದೆ. ಶ್ರೀ ಜಗದ್ಗುರು ರೇಣುಕಾದಿ ಪಂಚಾಚಾರ್ಯರು ಅಗಲಿದ ಅವರ ಪವಿತ್ರ ಆತ್ಮಕ್ಕೆ ಚಿರಶಾಂತಿ ನೀಡಲಿ, ಅಗಲಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ಶ್ರೀ ಮಠದ ಭಕ್ತರಿಗೆ ನೀಡಲೆಂದು ರಂಭಾಪುರಿ ಜಗದ್ಗುರುಗಳು ತಮ್ಮ ಸಂತಾಪದಲ್ಲಿ ತಿಳಿಸಿದ್ದಾರೆ.