ಜಿಲ್ಲೆಯಲ್ಲಿ 20.5 ಮಿ.ಮೀ ಸರಾಸರಿ ಮಳೆ 10.53 ಲಕ್ಷ ರೂ. ನಷ್ಟು ಅಂದಾಜು ಹಾನಿ

ದಾವಣಗೆರೆ, ಜು. 24- ಜಿಲ್ಲೆಯಲ್ಲಿ ಜುಲೈ 23 ರಂದು ಬಿದ್ದ ಮಳೆಯ ವಿವರದನ್ವಯ 20.5 ಮಿ.ಮೀ. ಸರಾಸರಿ ಮಳೆಯಾಗಿದ್ದು, ರೂ. 10.53 ಲಕ್ಷ ರೂ. ಅಂದಾಜು ನಷ್ಟ ಸಂಭವಿಸಿದೆ. ತಾಲ್ಲೂಕುವಾರು ಮಳೆ ಹಾಗೂ ಹಾನಿ ವಿವರ ಈ ಕೆಳಕಂಡಂತಿದೆ.

ಚನ್ನಗಿರಿಯಲ್ಲಿ ವಾಡಿಕೆ ಮಳೆ 4.6 ಮಿ.ಮೀ ಹಾಗೂ ವಾಸ್ತವ ಮಳೆ 25.8 ಮಿ.ಮೀ, ದಾವಣಗೆರೆ ತಾಲ್ಲೂಕಿನಲ್ಲಿ ವಾಡಿಕೆ ಮಳೆ 2.8 ಮಿ.ಮೀ ಹಾಗೂ ವಾಸ್ತವ ಮಳೆ 16.4 ಮಿ.ಮೀ, ಹರಿಹರದಲ್ಲಿ ವಾಡಿಕೆ ಮಳೆ 3.0 ಮಿ.ಮೀ ಹಾಗೂ ವಾಸ್ತವ ಮಳೆ 18.8 ಮಿ.ಮೀ, ಹೊನ್ನಾಳಿ ವಾಡಿಕೆ ಮಳೆ 2.8 ಮಿ.ಮೀ ಹಾಗೂ ವಾಸ್ತವ ಮಳೆ 30.2 ಮಿ.ಮೀ, ಜಗಳೂರು ವಾಡಿಕೆ ಮಳೆ 2.2 ಮಿ.ಮೀ ಹಾಗೂ ವಾಸ್ತವ ಮಳೆ 7.8 ಮಿ.ಮೀ,  ನ್ಯಾಮತಿಯಲ್ಲಿ ವಾಡಿಕೆ ಮಳೆ 4.2 ಮಿ.ಮೀ ಹಾಗೂ ವಾಸ್ತವ ಮಳೆ 36.5 ಮಿ.ಮೀ ಮಳೆಯಾಗಿದೆ.

ದಾವಣಗೆರೆ ತಾಲ್ಲೂಕು ವ್ಯಾಪ್ತಿಯಲ್ಲಿ 3 ಮನೆಗಳು ಭಾಗಶಃ ಹಾನಿಯಾಗಿದ್ದು ರೂ. 0.90 ಸಾವಿರ ಅಂದಾಜು ನಷ್ಟ ಸಂಭವಿಸಿದೆ.

ಹರಿಹರ ತಾಲ್ಲೂಕು ವ್ಯಾಪ್ತಿಯಲ್ಲಿ 7 ಮನೆಗಳು ಭಾಗಶಃ ಹಾನಿಯಾಗಿದ್ದು ರೂ.2.10 ಲಕ್ಷ ಅಂದಾಜು ನಷ್ಟ ಸಂಭವಿಸಿದೆ.

ಜಗಳೂರು ತಾಲ್ಲೂಕು ವ್ಯಾಪ್ತಿಯಲ್ಲಿ 2 ಮನೆಗಳು ಭಾಗಶಃ ಹಾನಿಯಾಗಿದ್ದು ರೂ. 0.13 ಸಾವಿರ ಅಂದಾಜು ನಷ್ಟ ಸಂಭವಿಸಿದೆ.

ಹೊನ್ನಾಳಿ ತಾಲ್ಲೂಕು ವ್ಯಾಪ್ತಿಯಲ್ಲಿ 2 ಮನೆಗಳು ಪೂರ್ಣ ಹಾನಿಯಾಗಿದ್ದು ರೂ. 3 ಲಕ್ಷ ಹಾಗೂ 2  ಮನೆಗಳು ಭಾಗಶಃ ಹಾನಿಯಾಗಿದ್ದು, ರೂ. 1 ಲಕ್ಷ ಅಂದಾಜು ನಷ್ಟ ಸಂಭವಿಸಿದೆ. ನ್ಯಾಮತಿ ತಾಲ್ಲೂಕು ವ್ಯಾಪ್ತಿಯಲ್ಲಿ 1 ಮನೆ ಪೂರ್ಣ ಹಾನಿಯಾಗಿದ್ದು ರೂ. 1 ಲಕ್ಷ ಅಂದಾಜು ನಷ್ಟ ಸಂಭವಿಸಿದೆ.

ಚನ್ನಗಿರಿ ತಾಲ್ಲೂಕು ವ್ಯಾಪ್ತಿಯಲ್ಲಿ 4 ಮನೆಗಳು ಪೂರ್ಣ ಹಾನಿಯಾಗಿದ್ದು ರೂ. 2 ಲಕ್ಷ ಹಾಗೂ 1 ಮನೆ ಭಾಗಶಃ ಹಾನಿಯಾಗಿದ್ದು ರೂ. 0.40 ಸಾವಿರ ಅಂದಾಜು ನಷ್ಟ ಸಂಭವಿಸಿದೆ. ಜಿಲ್ಲೆಯಲ್ಲಿ ಒಟ್ಟಾರೆ 6 ಲಕ್ಷ ಅಂದಾಜು ನಷ್ಟ ಸಂಭವಿಸಿದೆ. ಸರ್ಕಾರದ ಮಾರ್ಗಸೂಚಿ ಅನ್ವಯ ಸಂತ್ರಸ್ತರಿಗೆ ಪರಿಹಾರ ವಿತರಿಸಲು ಕ್ರಮ ವಹಿಸಲಾಗುವುದು ಎಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ತಿಳಿಸಿದ್ದಾರೆ.

error: Content is protected !!