ದಾವಣಗೆರೆ, ಜು.26- ನೂತನ ಜಿಲ್ಲಾಧಿಕಾರಿಯಾಗಿ ಬುಧವಾರ ಅಧಿಕಾರ ಸ್ವೀಕರಿಸಿದ ಡಾ. ವೆಂಕಟೇಶ್ ಎಂ.ವಿ. ಅವರು ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರನ್ನು ಇಂದು ಭೇಟಿ ಮಾಡಿದರು.
ಜಿಲ್ಲೆಯಲ್ಲಿ ಮಳೆ ಹೆಚ್ಚಿರುವ ಕಾರಣ ಅನೇಕ ಕಡೆ ಆಸ್ತಿಪಾಸ್ತಿ ಹಾನಿಗೊಳಗಾಗಿದ್ದು ಹಾಗೂ ನದಿ ಪಾತ್ರದಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಶಾಸಕರು ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.