ನಗರದಲ್ಲಿ ಇಂದು ಮಾನವ ಕಳ್ಳ ಸಾಗಾಣಿಕೆ ತಡೆ ಕಾರ್ಯಾಗಾರ

ಮಾನವ ಕಳ್ಳ ಸಾಗಾಣಿಕೆ ತಡೆ ಕುರಿತು ಕಾರ್ಯಾಗಾರವನ್ನು ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ಇಂದು ಬೆಳಿಗ್ಗೆ 10.30 ಗಂಟೆಗೆ ಹಮ್ಮಿಕೊಳ್ಳಲಾಗಿದೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಪೊಲೀಸ್ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಸ್ವಯಂ ಸೇವಾ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಕಾರ್ಯಾಗಾರವನ್ನು ಆಯೋಜಿಸಲಾಗಿದೆ. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಅಧ್ಯಕ್ಷರಾದ ಶ್ರೀಮತಿ ರಾಜೇಶ್ವರಿ ಎನ್. ಹೆಗಡೆ ಕಾರ್ಯಾಗಾರವನ್ನು ಉದ್ಘಾಟಿಸುವರು. ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ ಅಧ್ಯಕ್ಷತೆ ವಹಿಸುವರು.

ಮುಖ್ಯ ಅತಿಥಿಗಳಾಗಿ ಎಸ್ಪಿ ಡಾ. ಅರುಣ್. ಕೆ,  ಸುರೇಶ್. ಬಿ ಇಟ್ನಾಳ್, ಮಹಾವೀರ್. ಎಂ. ಕರೆಣ್ಣವರ್, ಡಾ. ನಾಗರಾಜ್, ನಾಗರಾಜ ಕೆ., ತಿಪ್ಪೇಶಪ್ಪ, ಇಬ್ರಾಹಿಂ ಸಾಬ್ ಜಿ, ಅಪರ್ಣಾ ಎಂ. ಕೊಳ್ಳ, ರಾಮಾನಾಯ್ಕ್, ಅರುಣ್ ಕುಮಾರ್.ಎಲ್.ಹೆಚ್, ಶ್ರೀಮತಿ ಮಲ್ಲಮ್ಮಚೌಬೆ, ಫಾ. ರೆಜಿ ಜೇಕಬ್, ಡಾ.ಜಿ.ಎಸ್.ಯತೀಶ್ ಭಾಗವಹಿಸುವರು.

error: Content is protected !!