ವಿದ್ಯುತ್ ಕಂಬಕ್ಕೆ ಖಾಸಗಿ ಬಸ್ ಡಿಕ್ಕಿ ವಿದ್ಯಾರ್ಥಿಗಳಿಗೆ ಶಾಕ್

ಶಿವಮೊಗ್ಗ, ಆ.2- ಖಾಸಗಿ ಬಸ್‌ ಒಂದು ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ 35ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಕರೆಂಟ್ ಶಾಕ್‌ ಹೊಡೆದಿದ್ದು ಇದರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ನಡೆದಿದೆ.

ಸಾಗರದ ಹೊಳೆಬಾಗಿಲು ಸಮೀಪದ ಗೆಣಸಿನಕುಣಿ ಗ್ರಾಮದ ಸಮೀಪ ಈ ಘಟನೆ ನಡೆದಿದೆ. 

ಹೊಳೆಬಾಗಿಲಿನಿಂದ ಸಾಗರಕ್ಕೆ 45 ಮಂದಿ ಪ್ರಯಾಣಿಕರನ್ನು ಹೊತ್ತು ಬರುತ್ತಿದ್ದ ಎಸ್ ಬಿಕೆ ಸಂಸ್ಥೆಗೆ ಸೇರಿದ ಖಾಸಗಿ ಬಸ್ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಈ ವೇಳೆ 35 ವಿದ್ಯಾರ್ಥಿಗಳು ಶಾಕ್‌ಗೆ ಒಳಗಾಗಿದ್ದಾರೆ. ಅಲ್ಲದೆ ಕೆಲವರು ಬಸ್ಸಿನೊಳಗೇ ಉರುಳಿ ಬಿದ್ದರು. 

ಗಾಯಾಳು ವಿದ್ಯಾರ್ಥಿಗಳಿಗೆ ಸಾಗರ ಉಪವಿಭಾಗೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

error: Content is protected !!